Advertisement
ಮೇಲುಕೋಟೆ ಕ್ಷೇತ್ರದ ವಿವಿಧ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಪರಿಶೀಲನೆ ನಡೆಸಿ ನಂತರ ಮಂಡ್ಯ ತಾಲೂಕಿನ ವಿ.ಸಿ.ಫಾರಂನ ಅತಿಥಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಹಿಂದೆ ಎರಡೆರಡು ಖಾತೆಗಳಿದ್ದವು. ಅದನ್ನು ವಾಪಸ್ ಪಡೆದು ಸಣ್ಣ ನೀರಾವರಿ ಇಲಾಖೆಯ ಖಾತೆ ವಹಿಸಿದ್ದಾರೆ. ಇದರಲ್ಲಿ ನನಗೆ ಯಾವುದೇ ಬೇಸರವಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
Related Articles
ಕುರುಬರ ಸಮಾವೇಶದ ಬಗ್ಗೆ ನನಗೆ ಗೊತ್ತಿಲ್ಲ. ಸರ್ಕಾರದ ಐವರು ಸಚಿವರು ಭಾಗಿಯಾಗಿರುವ ಬಗ್ಗೆ ಯಾವುದೇ ವಿವಾದವಿಲ್ಲ. ಅವರ ಅಭಿಪ್ರಾಯಗಳನ್ನು ವಿವಾದ ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
Advertisement
ನೀರಾವರಿ ಸಮಸ್ಯೆ ಬಗೆಹರಿಸಲಾಗುವುದು:ಮೈತ್ರಿ ಸರ್ಕಾರದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದ ಸಿ.ಎಸ್.ಪುಟ್ಟರಾಜು ಅವರು ಮೇಲುಕೋಟೆ ವಿಧಾನಸಭಾ ಕ್ಷೇತ್ರ ಸೇರಿದಂತೆ ಮಂಡ್ಯ ಜಿಲ್ಲೆಗೆ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಯೋಜನೆಗಳನ್ನು ರೂಪಿಸಿದ್ದರು. ಆ ಯಾವ ಕೆಲಸಗಳನ್ನು ಬಿಜೆಪಿ ಸರ್ಕಾರ ನಿಲ್ಲಿಸುವುದಿಲ್ಲ. ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಲು ನಾನು ಬದ್ಧ ಎಂದು ಭರವಸೆ ನೀಡಿದರು. ಪುಟ್ಟರಾಜು ಅವರು ಸಚಿವರಾಗಿದ್ದ ಕಾಲದಲ್ಲಿ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಳಘಟ್ಟ ವ್ಯಾಪ್ತಿಯ 56 ಕೆರೆ, ದುದ್ದ ಹೋಬಳಿಯ 58 ಕೆರೆ ಹಾಗೂ ನಾಮನಹಳ್ಳಿ ಭಾಗದ ಅನೇಕ ಕೆರೆಗಳ ಪುನರುಜ್ಜೀವನ ಕೆಲಸಕ್ಕೆ ಚಾಲನೆ ನೀಡಿದ್ದರು. ಇದೀಗ ಆ ಎಲ್ಲ ಕೆರೆಗಳನ್ನು ಅಭಿವೃದ್ಧಿಗೊಳಿಸಿ ಕೊಡುವ ನಿಟ್ಟಿನಲ್ಲಿ ಇಂದು ಸ್ಥಳ ಪರಿಶೀಲನೆ ನಡೆಸಿದ್ದು, ಶೀಘ್ರವೇ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು.