Advertisement

Madhya Pradesh: ಬಸ್-ಟ್ರಕ್ ಡಿಕ್ಕಿ, 3 ಮೃತ್ಯು, 7 ಮಂದಿಗೆ ಗಾಯ

09:31 AM Jun 17, 2023 | Team Udayavani |

ಮಧ್ಯಪ್ರದೇಶ:  ಬಸ್ ಮತ್ತು ಟ್ರಕ್ ಡಿಕ್ಕಿಯಾಗಿರುವ ಘಟನೆ ಮಧ್ಯಪ್ರದೇಶದ ಮೊರೆನಾದ ದೇವ್ ಪುರಿ ಬಾಬಾ ಪ್ರದೇಶದಲ್ಲಿ ಶನಿವಾರ ಸಂಭವಿಸಿದೆ. ಈ ಅಪಘಾತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Advertisement

ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಕುರಿತು ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶೈಲೇಂದ್ರ ಸಿಂಗ್ ಚೌಹಾಣ್, “ಗ್ವಾಲಿಯರ್‌ನಿಂದ ದೆಹಲಿಗೆ ಹೋಗುವ ಮಾರ್ಗದಲ್ಲಿ ಟ್ರಕ್ ಮತ್ತು ಪ್ರಯಾಣಿಕರ ಬಸ್ ಡಿಕ್ಕಿ ಹೊಡೆದಿದೆ. ಮೂವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.”ನಾವು ಘಟನೆಯನ್ನು ಮತ್ತಷ್ಟು ಪರಿಶೀಲಿಸುತ್ತಿದ್ದೇವೆ” ಎಂದು ಅವರು ಹೇಳಿದರು.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ….

ಮೇ 31ರಂದು ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಕಾರು ಹೊತ್ತಿ ಉರಿದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next