Advertisement

ಅಕ್ರಮ ಪಟಾಕಿ ಗೋದಾಮಿನಲ್ಲಿ ಸ್ಫೋಟ; 4 ಬಲಿ, ಹಲವರಿಗೆ ಗಾಯ

03:40 PM Oct 20, 2022 | Team Udayavani |

ಮೊರೆನಾ: ಮನೆಯೊಂದರಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಗುರುವಾರ ಮಧ್ಯಪ್ರದೇಶದ ಬಾನ್ಮೋರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಅಕ್ರಮ ಪಟಾಕಿ ಗೋದಾಮಿನಲ್ಲಿ ಸ್ಫೋಟ ನಡೆದಿದೆ ಎಂದು ವರದಿಯಾಗಿದ್ದು, ಸ್ಫೋಟಕ್ಕೆ ಕಾರಣ ಪಟಾಕಿ ಅಥವಾ ಇನ್ನೇನಾದರೂ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ನಾಲ್ವರು ಸಾವನ್ನಪ್ಪಿದ್ದು, ಗಾಯಗೊಂಡ 7 ಮಂದಿಯ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಕಾರ್ತಿಕೇಯನ್ ಹೇಳಿದ್ದಾರೆ.

ಅವಘಡದಲ್ಲಿ ಕೆಲವರು ಅವಶೇಷಗಳ ಅಡಿಯಲ್ಲಿ ಹೂತುಹೋಗಿರುವ ಶಂಕೆ ವ್ಯಕ್ತವಾಗಿದೆ ಎಂದು ಚಂಬಲ್ ಶ್ರೇಣಿಯ ಐಜಿ ರಾಕೇಶ್ ಚಾವ್ಲಾ ಹೇಳಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಕನಿಷ್ಠ ಒಂದು ಮಗುವನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸ್ ಅಧಿಕಾರಿಗಳು, ತಜ್ಞರು ಸ್ಥಳಕ್ಕೆ ದೌಡಾಯಿಸಿದ್ದು, ಯಾವ ಕಾರಣಕ್ಕೆ ಸ್ಫೋಟ ನಡೆದಿದೆ ಎಂದು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next