Advertisement
ಮಂಗಳವಾರ ಬೆಳಿಗ್ಗೆ 8.45 ರ ವೇಳೆ 54 ಮಂದಿ ಪ್ರಯಾಣಿಕರನ್ನು ಹೊತ್ತ ಬಸ್ ಸಿದಿಯಿಂದ ಸತ್ನಾಕ್ಕೆ ತೆರಳುತ್ತಿದ್ದ ವೇಳೆ ಪಾಟ್ನಾ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾಲುವೆಗೆ ಉರುಳಿ ಬಿದ್ದಿದೆ, ಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದ ಪರಿಣಾಮ ಬಸ್ ನೀರಿನಲ್ಲಿ ಮುಳುಗಿ 45 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ, ಏಳು ಮಂದಿ ಪ್ರಯಾಣಿಕರು ಈಜಿ ದಡ ಸೇರಿದ್ದಾರೆ ಎಂದು ಅಲ್ಲಿನ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
Related Articles
ಘಟನೆ ನಡೆದ ವಿಷಯ ತಿಳಿದ ಕೂಡಲೇ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದು ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
Advertisement