Advertisement

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದಿದ್ದ 6 ವರ್ಷದ ಮಗು ಸಾವು

12:34 AM Apr 15, 2024 | Team Udayavani |

ಭೋಪಾಲ್‌: ಮಧ್ಯಪ್ರದೇಶದ ರೀವಾ ಜಿಲ್ಲೆಯಲ್ಲಿ ಶುಕ್ರವಾರ ಆಟವಾಡುವ ವೇಳೆ ಕೊಳವೆ ಬಾವಿಗೆ ಬಿದ್ದಿದ್ದ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ. 40 ಅಡಿ ಆಳದಲ್ಲಿ ಸಿಲು ಕಿದ್ದ ಬಾಲಕಕನ್ನು ರಕ್ಷಿಸಲು ಎನ್‌ಡಿಆರ್‌ಎಫ್ ಜಿಲ್ಲಾಡಳಿತ ವತಿಯಿಂದ ಜಂಟಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಕಡಿದಾದ ಜಾಗದಲ್ಲಿ ಬಾಲಕನು ಸಿಲುಕಿದ್ದರಿಂದ 40 ಗಂಟೆಗಳ ಹರಸಾಹಸದ ನಡುವೆಯೂ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next