ಹೊಸದಿಲ್ಲಿ: ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಗಳಾಗಿ ಮೋಹನ್ ಯಾದವ್ ಮತ್ತು ವಿಷ್ಣು ದೇವ್ ಸಾಯಿ ಅವರು ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜ್ಯ ರಾಜಧಾನಿಯ ಲಾಲ್ ಪರೇಡ್ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮೋಹನ್ ಯಾದವ್ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅದೇ ರೀತಿ ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ವಿಷ್ಣು ಸಾಯಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಛತ್ತೀಸ್‌ಗಢದ ರಾಯ್‌ಪುರದ ವಿಜ್ಞಾನ ಕಾಲೇಜು ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಇತರರು ಪಾಲ್ಗೊಳ್ಳುವ ಸಾಧ್ಯತೆ ಇದೆ.
ಮಧ್ಯಪ್ರದೇಶ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಹೊಂದಿದ್ದು ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವದಾ. ಮಾಜಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ವಿಧಾನಸಭೆ ಸ್ಪೀಕರ್ ಆಗಲಿದ್ದಾರೆ.
ಬುಧವಾರ ಮೋತಿಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನಮ್ಮ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಅವರ ಸಂಪುಟ ಪ್ರಮಾಣ ವಚನ ಸ್ವೀಕರಿಸಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಆಯೋಜಿಸಲಾಗಿದ್ದು, ಐತಿಹಾಸಿಕವಾಗಲಿದೆ,’’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿ.ಡಿ.ಶರ್ಮಾ ಹೇಳಿದ್ದಾರೆ.
ಪ್ರಧಾನಿ ಮೋದಿ, ಶಾ, ನಡ್ಡಾ ಸೇರಿದಂತೆ ಪಕ್ಷದ ಇತರ ಅಧಿಕಾರಿಗಳು, ಕೇಂದ್ರ ಸಚಿವರು ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶರ್ಮಾ ಹೇಳಿದರು.
ಇದನ್ನೂ ಓದಿ: Gaza Ceasefire;ಇಸ್ರೇಲ್-ಹಮಾಸ್ ಕದನವಿರಾಮ ಘೋಷಿಸಲಿ: ವಿಶ್ವಸಂಸ್ಥೆಯ ನಿರ್ಣಯದ ಪರ ಭಾರತ ಮತ