Advertisement

CM ಆಗಿ 1 ಗಂಟೆಯಲ್ಲೇ ರೈತರ ಸಾಲಮನ್ನಾ ಕಡತಕ್ಕೆ ಸಹಿಹಾಕಿದ ಕಮಲ್ ನಾಥ್

06:52 PM Dec 17, 2018 | Sharanya Alva |

ಭೋಪಾಲ್:ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹಿರಿಯ ಮುಖಂಡ ಕಮಲ್ ನಾಥ್ ಸೋಮವಾರ ಪ್ರಮಾಣವಚನ ಸ್ವೀಕರಿಸಿದ 1 ಗಂಟೆಯಲ್ಲೇ ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ರೈತರ ಸಾಲಮನ್ನಾ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

Advertisement

ಮಧ್ಯಪ್ರದೇಶ ಚುನಾವಣಾ ಪ್ರಚಾರ ಘೋಷಣೆಯ ವೇಳೆ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿತ್ತು. ಆ ನಿಟ್ಟಿನಲ್ಲಿ ಇಂದು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಮಲ್ ನಾಥ್ ರೈತರ ಸಾಲಮನ್ನಾ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ 10 ದಿನದೊಳಗಾಗಿ ರೈತರ ಸಾಲಮನ್ನಾ ಮಾಡುವುದಾಗಿ ನೀಡಿರುವ ಭರವಸೆಯನ್ನು ಕೇವಲ 1 ಗಂಟೆಯಲ್ಲೇ ಮಾಡಿದ್ದಾರೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಮಾಧ್ಯಮಗಳ ವರದಿ ಪ್ರಕಾರ, ಮಧ್ಯಪ್ರದೇಶ ರೈತರ ಸುಮಾರು 50 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿರುವುದಾಗಿ ತಿಳಿಸಿದೆ. ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳ ಮಾಹಿತಿ ಪ್ರಕಾರ, ಮಾರ್ಚ್ 31ರವರೆಗಿನ ರಾಷ್ಟ್ರೀಕೃತ ಹಾಗೂ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿನ 2 ಲಕ್ಷ ರೂಪಾಯಿವರೆಗಿನ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next