Advertisement

ಅನಾರೋಗ್ಯದಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ವಿಧಿವಶ

12:24 PM Jul 21, 2020 | Mithun PG |

ಲಕ್ನೋ: ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರಿಗೆ 85 ವರ್ಷ ವಯಸ್ಸಾಗಿತ್ತು. ಇವರ ವಿಧಿವಶದ ಸುದ್ದಿಯನ್ನು ಮಗ ಅಶುತೋಷ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ.

Advertisement

ಕಳೆದ ಜೂನ್ 11 ರಂದು ಉಸಿರಾಟದ ಸಮಸ್ಯೆ, ಮೂತ್ರಕೋಶದ ತೊಂದರೆ, ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ಲಕ್ನೋದಲ್ಲಿನ ಮೆದಂತಾ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಲಾಗಿತ್ತು. ಮಾತ್ರವಲ್ಲದೆ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿದ್ದರೂ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಆದರೇ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಟಂಡನ್ ಅವರು  ಉತ್ತರ ಪ್ರದೇಶದ ಕಲ್ಯಾಣ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದರು. ಬಿಜೆಪಿ-ಬಿಎಸ್ ಪಿ  ಮೈತ್ರಿಕೂಟದ ಮಾಯಾವತಿ ಆಡಳಿತದಲ್ಲಿ ನಗರಾಭಿವೃದ್ಧಿ ಸಚಿವರಾಗಿ ಕೂಡ ಕಾರ್ಯನಿರ್ವಹಿಸಿದ್ದರು.

Advertisement

2009 ರಲ್ಲಿ ಲಕ್ನೋದಿಂದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.  ಆಗಸ್ಟ್ 2018 ರಿಂದ ಜುಲೈ 2019ರವರೆಗೂ ಬಿಹಾರದ ರಾಜ್ಯಪಾಲರಾಗಿದ್ದರು. ನಂತರದಲ್ಲಿ ಮಧ್ಯಪ್ರದೇಶ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಆದರೇ ಜೂನ್ ನಲ್ಲಿ ಲಾಲ್ ಜಿ ಟಂಡನ್ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಉತ್ತರಪ್ರದೇಶ ರಾಜ್ಯಪಾಲೆಯಾಗಿರುವ ಆನಂದಿಬೆನ್ ಪಟೇಲ್ ಹೆಚ್ಚುವರಿಯಾಗಿ ಮಧ್ಯಪ್ರದೇಶದ ಉಸ್ತುವಾರಿ ವಹಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next