ಭೋಪಾಲ್: ಮಧ್ಯಪ್ರದೇಶದ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರ ಸೊಸೆ ಸವಿತಾ ಪರ್ಮಾರ್ ಶಾಜಾಪುರ್ ಜಿಲ್ಲೆಯಲ್ಲಿರುವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣ; NIA ಕೋರ್ಟ್ ನಲ್ಲಿ ತಪ್ಪೊಪ್ಪಿಕೊಂಡ ಮಲಿಕ್
ಸವಿತಾ ಪರ್ಮಾರ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಕುಟುಂಬದ ಸದಸ್ಯರು ಖಚಿತಪಡಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಕೌಟುಂಬಿಕ ಸಮಸ್ಯೆಯೇ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು ಈವರೆಗೂ ಯಾವುದನ್ನೂ ದೃಢಪಡಿಸಿಲ್ಲ ಎಂದು ವರದಿ ವಿವರಿಸಿದೆ.
ಕಳೆದ ಮೂರು ವರ್ಷಗಳ ಹಿಂದೆ ಸಚಿವ ಇಂದರ್ ಸಿಂಗ್ ಪರ್ಮಾರ್ ಪುತ್ರ ದೇವ್ ರಾಜ್ ಸಿಂಗ್ ಸವಿತಾ ಪರ್ಮಾರ್ (23ವರ್ಷ) ಅವರನ್ನು ವಿವಾಹವಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಘಟನೆ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ವರದಿ ಹೇಳಿದೆ.