Advertisement

Madhya Pradesh Polls: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್: ಕಮಲ್ ನಾಥ್

02:17 PM May 19, 2023 | Team Udayavani |

ಮಧ್ಯಪ್ರದೇಶ: ಈ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮನೆಗಳಿಗೆ 100 ಯೂನಿಟ್ ಉಚಿತ ಮತ್ತು ನಂತರ ಅರ್ಧ ಬೆಲೆಯಲ್ಲಿ 200 ಯೂನಿಟ್‌ಗಳಿಗೆ ವಿದ್ಯುತ್ ನೀಡಲಿದೆ ಎಂದು ಕಾಂಗ್ರೆಸ್‌ ಮುಖ್ಯಸ್ಥ ಕಮಲ್‌ ನಾಥ್‌ ಹೇಳಿದ್ದಾರೆ.

Advertisement

ಇಲ್ಲಿನ ಜಿಲ್ಲಾ ಕೇಂದ್ರದಿಂದ 50 ಕಿಲೋಮೀಟರ್ ದೂರದಲ್ಲಿರುವ ಬದ್ನಾವರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು , ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಬಡ ಮಹಿಳೆಯರಿಗೆ ತಿಂಗಳಿಗೆ ₹ 1,500 ನೀಡಲಿದೆ ಮತ್ತು ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ತರಲಿದೆ ಎಂದು ಹೇಳಿದರು.

ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಮಲ್ ನಾಥ್, ತಮಿಳುನಾಡಿನಲ್ಲಿ ಹಿಂದಿಯ ಮೇಲೆ ಗದ್ದಲ ಎಬ್ಬಿಸಲಾಗಿದೆ, ಪಂಜಾಬ್‌ನಲ್ಲಿ ಖಲಿಸ್ತಾನಿ ಪರ ಘೋಷಣೆಗಳು ಮತ್ತು ಮಣಿಪುರದಲ್ಲಿ ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದವರ ನಡುವೆ ಹಿಂಸಾಚಾರ ನಡೆಯುತ್ತಿದೆ ಇದು ಹಲವಾರು ಸಾವಿಗೆ ಕಾರಣವಾಯಿತು ಎಂದು ಹೇಳಿದರು.

“ಸಮಾಜವನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ. ಇದು ದೊಡ್ಡ ಸವಾಲಾಗಿದೆ ಮತ್ತು ನಾವು ನಮ್ಮ ಸಂಸ್ಕೃತಿಯ ರಕ್ಷಕರಾಗಿ ಕಾರ್ಯನಿರ್ವಹಿಸಬೇಕಾಗಿದೆ. ಬಿಜೆಪಿಯು ಧರ್ಮವನ್ನು ರಾಜಕೀಯಗೊಳಿಸಿದೆ ಎಂದು ಹೇಳಿದರು.

2018 ರ ಚುನಾವಣೆಯಲ್ಲಿ 230 ಸದಸ್ಯ ಬಲದ ಅಸೆಂಬ್ಲಿಯಲ್ಲಿ 114 ಸ್ಥಾನಗಳೊಂದಿಗೆ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next