ಮಧ್ಯಪ್ರದೇಶ: ಇಂದು (ಶನಿವಾರ) ಬೆಳಿಗ್ಗೆ ಭೋಪಾಲ್‌ನ ವಲ್ಲಭ ಭವನದ ರಾಜ್ಯ ಸಚಿವಾಲಯದ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಈ ಕುರಿತು ಮಾಹಿತಿ ನೀಡಿದ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಶನಿವಾರ ಬೆಳಿಗ್ಗೆ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಘಟನೆ ನಡೆದ ಕೆಲವೇ ಸಮಯದಲ್ಲಿ ಅಗ್ನಿಶಾಮಕ ಸಿಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ದೃಢಪಡಿಸಿದ ಮುಖ್ಯಾಧಿಕಾರಿ ಮೋಹನ್ ಯಾದವ್, “ಜಿಲ್ಲಾಧಿಕಾರಿಯಿಂದ ಬಂದ ಮಾಹಿತಿಯ ಆಧಾರದ ಮೇಲೆ, ಘಟನೆಯ ಬಗ್ಗೆ ವಿವರವಾದ ಮಾಹಿತಿಯನ್ನು ಸಂಗ್ರಹಿಸಲು ಹೇಳಿರುವುದಾಗಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ವಿಡಿಯೋಗಳು ಹರಿದಾಡುತ್ತಿದ್ದು ವಿಡಿಯೋದಲ್ಲಿ ಕಟ್ಟಡದ ಮೇಲ್ಬಾಗದಲ್ಲಿ ದಟ್ಟ ಹೊಗೆ ಕಾಣುತ್ತಿದ್ದು ಜೊತೆಗೆ ಪೊಲೀಸ್ ಸಿಬಂದಿ ಹಾಗೂ ಅಗ್ನಿಶಾಮಕ ಸಿಬಂದಿಗಳು ಸ್ಥಳದಲ್ಲಿ ಇರುವುದು ಕಾಣಬಹುದು. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ, ಕಟ್ಟಡದಲ್ಲಿದ್ದ ಕಾಗದ ದಾಖಲಾತಿಗಳು ನಾಶವಾಗಿರುವ ಬಗ್ಗೆ ಇನ್ನಷ್ಟೇ ವರದಿ ಬರಬೇಕಾಗಿದೆ.
ಮಾರ್ಚ್ 9 ರ ಶನಿವಾರ ಬೆಳಿಗ್ಗೆ, ಸೆಕ್ರೆಟರಿಯೇಟ್ ಕಟ್ಟಡದಿಂದ ಕಪ್ಪು ಹೊಗೆಯೊಂದು ಏರಿತು. ಬೆಂಕಿ ತೀವ್ರವಾಗಿದೆ ಎಂದು ಹೊಗೆಯಿಂದ ನಿರ್ಣಯಿಸಬಹುದು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ಆರಂಭಿಸಿವೆ. ಸದ್ಯ ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ಇನ್ನೂ ಕಾಯಲಾಗುತ್ತಿದೆ.
ಭೋಪಾಲ್‌ನ ವಲ್ಲಭ ಭವನದ ರಾಜ್ಯ ಸಚಿವಾಲಯದಲ್ಲಿ ಬೆಂಕಿಯ ಸುದ್ದಿ ತಿಳಿದ ತಕ್ಷಣ, ಪೊಲೀಸರು ಮತ್ತು ಅಗ್ನಿಶಾಮಕ ದಳದ ವಾಹನಗಳು ಅಲ್ಲಿಗೆ ತಲುಪಿದ್ದು, ಇದೀಗ ಬೆಂಕಿಯ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ.