ಭೂಪಾಲ್: ಕ್ಷಣ ಕ್ಷಣಕ್ಕೂ ತೀವ್ರ ಕುತೂಹಲ ಕೆರಳಿಸಿದ್ದ ಮಧ್ಯಪ್ರದೇಶ ವಿಧಾನಸಭಾ ಮತ ಏಣಿಕೆ ಬುಧವಾರ ಬೆಳಗ್ಗೆ ಅಂತ್ಯಗೊಂಡಿದ್ದು, ಕಾಂಗ್ರೆಸ್ ಪಕ್ಷೇತರರ ಬೆಂಬಲದೊಂದಿಗೆ ಸರ್ಕಾರ ರಚಿಸುವುದು ಖಚಿತವಾಗಿದೆ.
ಚುನಾವಣಾ ಆಯೋಗ ಸುಧೀರ್ಘ ಮತ ಎಣಿಕೆಯ ಬಳಿಕ ಬುಧವಾರ ಬೆಳಗ್ಗೆ 7.20 ರ ವೇಳೆ ಅಧಿಕೃತವಾಗಿ ಫಲಿತಾಂಶ ಪ್ರಕಟ ಮಾಡಿದೆ.
ಅಂತಿಮ ಫಲಿತಾಂಶದಲ್ಲಿ ಕಾಂಗ್ರೆಸ್ 114 ಸ್ಥಾನಗಳನ್ನು ಗೆದ್ದಿದ್ದು, ಸರಳ ಬಹುಮತಕ್ಕೆ 2 ಸ್ಥಾನಗಳು ಕಡಿಮೆಯಾಗಿವೆ. ಈಗಾಗಲೇ ಕಾಂಗ್ರೆಸ್ ನಾಯಕರು ಪಕ್ಷೇತರರೊಂದಿಗೆ ಮಾತುಕತೆ ನಡೆಸಿದ್ದಾರೆ. 4 ಮಂದಿ ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದಾರೆ.
ಬಿಜೆಪಿ 109 ಸ್ಥಾನಗಳನ್ನು ಗೆದ್ದಿದ್ದು, ಬಿಎಸ್‌ಪಿ 2 ಮತ್ತು ಎಸ್‌ಪಿ 1 ಸ್ಥಾನಗಳನ್ನು ಗೆದ್ದಿದೆ.
ಕಾಂಗ್ರೆಸ್ ಪಕ್ಷ ವೀಕ್ಷಕರನ್ನಾಗಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಎ.ಕೆ.ಆ್ಯಂಟನಿ ಅವರನ್ನು ನೇಮಿಸಿದೆ.