Advertisement

ಸುರಂಗ ಗುಹೆಯಲ್ಲಿ ಸಿಲುಕಿದ ಕಾರ್ಮಿಕರು; ಏಳು ಮಂದಿಯ ರಕ್ಷಣೆ

10:02 AM Feb 13, 2022 | Team Udayavani |

ಭೋಪಾಲ್: ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲೀಮನಾಬಾದ್‌ನಲ್ಲಿ ಬಾರ್ಗಿ ಕಾಲುವೆ ಯೋಜನೆಯ ನಿರ್ಮಾಣ ಹಂತದ ಸುರಂಗದಲ್ಲಿ ಒಂಬತ್ತು ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆಗಳು ನಡೆಯುತ್ತಿದ್ದು, ಒಂಬತ್ತು ಕಾರ್ಮಿಕರಲ್ಲಿ ಏಳು ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ ತಂಡದೊಂದಿಗೆ ಸ್ಥಳೀಯ ಅಧಿಕಾರಿಗಳು ಉಳಿದ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ.

ಎಸ್‌ಡಿಇಆರ್‌ಎಫ್ ತಂಡ ಜಬಲ್‌ಪುರದಿಂದ ಆಗಮಿಸಿದೆ ಎಂದು ಕಟ್ನಿ ಜಿಲ್ಲಾಧಿಕಾರಿ ಪ್ರಿಯಾಂಕ್ ಮಿಶ್ರಾ ತಿಳಿಸಿದ್ದಾರೆ.

ಮಧ್ಯಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೇಶ್ ರಾಜೋರಾ ಅವರು ರಾಜ್ಯ ಸಚಿವಾಲಯದಿಂದ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

“ಅಗತ್ಯ ಸಾಧನಗಳೊಂದಿಗೆ ಎಸ್‌ಡಿಇಆರ್‌ಎಫ್ ತಂಡವು ಶಾಫ್ಟ್ ಅಗೆಯುವ ಮೂಲಕ ಕಾರ್ಮಿಕರನ್ನು ತಲುಪಲು ಪ್ರಯತ್ನಿಸುತ್ತಿದೆ. ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ” ಎಂದು ರಾಜೋರಾ ಪಿಟಿಐಗೆ ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next