ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ 350ನೇ ಆರಾಧನೆ ನಿಮಿತ್ತ ಮಂಗಳವಾರ ರಾಯರ ಮಧ್ಯಾರಾಧನೆ ವಿಜೃಂಭಣೆಯಿಂದ ಜರುಗತ್ತಿದೆ. ತಿರುಪತಿ ತಿರುಮಲ ದೇವಸ್ಥಾನದಿಂದ ಆಗಮಿಸಿದ ಶೇಷವಸ್ತ್ರಗಳನ್ನು ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಬರಮಾಡಿಕೊಂಡರು.
ಸಕಲ ವಾದ್ಯ ಮೇಳದೊಂದಿಗೆ ಮೆರವಣಿಗೆ ನಡೆಸಿ ಶ್ರೀ ರಾಯರ ಮೂಲ ಬೃಂದಾವನಕ್ಕೆ ಹಾಗೂ ಮಂಚಾಲಮ್ಮನಿಗೆ ಸಮರ್ಪಿಸಲಾಯಿತು. ಬಳಿಕ ಮಠದ ಪ್ರಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಯರು ಹಾಗೂ ಮೂಲ ರಾಮದೇವರಿಗೆ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಿದ ಚಿನ್ನದ ಪಾತ್ರೆಗಳು, ಚಿನ್ನದ ಚಾಮರ ಹಾಗೂ ರಾಯರ ಬೃಂದಾವನಕ್ಕೆ ರತ್ನಖಚಿತ ಆಭರಣಗಳನ್ನು ಸಮರ್ಪಿಸಲಾಯಿತು.
ಇದನ್ನೂ ಓದಿ:ನಾಡಿನ ಅಭಿವೃದ್ಧಿಗೆ ಪೂರ್ಣಾವಧಿ ಅಧಿಕಾರ ನೀಡಿ : ಎಚ್.ಡಿ.ಕುಮಾರಸ್ವಾಮಿ
ಬಳಿಕ ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ಜರುಗಿಸಲಾಯಿತು. ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಸಾಕ್ಷಿಯಾದರು.