Advertisement

ಮಡಿಕೇರಿ: “ಪ್ರವಾಸಿಗರ ಜತೆ ಅನುಚಿತವಾಗಿ ವರ್ತಿಸಿದರೆ ಕ್ರಮ’

12:18 AM May 31, 2023 | Team Udayavani |

ಮಡಿಕೇರಿ: ಜಿಲ್ಲೆಯ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಜತೆಗೆ ಸೌಜನ್ಯ, ವಿನಯದಿಂದ ನಡೆದುಕೊಳ್ಳಬೇಕು. ಅನುಚಿತವಾಗಿ ವರ್ತಿಸಿದರೆ ಕಾನೂನು ರೀತಿಯ ಕ್ರಮ ಜರಗಿಸಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಎಚ್ಚರಿಸಿದ್ದಾರೆ.

Advertisement

ಪೊಲೀಸ್‌ ಇಲಾಖೆಯಿಂದ 10 ದಿನದೊಳಗೆ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಲ್ಲಿ ಮಾಹಿತಿ ಫ‌ಲಕ ಅಳವಡಿಸಲಾಗುವುದು. ಮುಖ್ಯ ಹೆದ್ದಾರಿಗಳಲ್ಲಿಯೂ ಸಹ ಸೂಚನಾ ಫ‌ಲಕ ಅಳವಡಿಸಲಾಗುವುದು ಎಂದರು. ಪ್ರವಾಸಿಗರಿಗೆ ಯಾವುದೇ ತೊಂದರೆಯಾದಲ್ಲಿ ಪೊಲೀಸ್‌ ತುರ್ತು ಸೇವೆ 112 ಸಂಖ್ಯೆಗೆ ಕರೆ ಮಾಡುವಂತೆ ಕೋರಿದರು.

Advertisement

Udayavani is now on Telegram. Click here to join our channel and stay updated with the latest news.

Next