ಮಡಿಕೇರಿ: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದ್ದು. ಇಲ್ಲಿನ ಹಂದಿ ಸಾಕಾಣಿಕೆ ಕೇಂದ್ರದಲ್ಲಿರುವ ಹಂದಿಗಳಲ್ಲಿ ಆಫ್ರಿಕನ್ ಹಂದಿಜ್ವರ ಇರುವುದು ದೃಢಪಟ್ಟಿದೆ. ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳಲಾಗಿದೆ ಎಂದು ಪಶುಪಾಲನ ಇಲಾಖೆ ಉಪ ನಿರ್ದೇಶಕ ಡಾ| ಪಿ. ಸುರೇಶ್ ಭಟ್ ಅವರು ತಿಳಿಸಿದರು.
ನಗರದ ಪಶುಪಾಲನ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಹಂದಿ ಸಾಕಾಣಿಕ ಕೇಂದ್ರದ 1 ಕಿ.ಮೀ. ವ್ಯಾಪ್ತಿಯನ್ನು ರೋಗ ಪೀಡಿತ ವಲಯವೆಂದು ಮತ್ತು 10 ಕಿ.ಮೀ. ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ ಎಂದರು.
ಸೋಂಕಿಗೆ ತುತ್ತಾಗಿರುವ ಹಂದಿಗಳನ್ನು ವಧೆ ಮಾಡಿ ವೈಜ್ಞಾನಿಕ ರೂಪದಲ್ಲಿ ಸಂಸ್ಕಾರ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ : 2.3 ಅಡಿ ಎತ್ತರದ ಹುಡುಗನ ಮದುವೆ ಕನಸು ಕೊನೆಗೂ ನನಸು! ಮೋದಿ, ಯೋಗಿಗೆ ಮದುವೆ ಆಮಂತ್ರಣ