Advertisement

ಡಿ. 14: ಹೋರಾಟ ಸಮಿತಿಯಿಂದ ಬೃಹತ್‌ ಪ್ರತಿಭಟನೆ

01:40 AM Dec 14, 2018 | Team Udayavani |

ಮಡಿಕೇರಿ: ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ತಳೆದಿರುವ ವಿಳಂಬ ಧೋರಣೆಯನ್ನು ವಿರೋಧಿಸಿ  ಡಿ.14ರಂದು ಮಡಿಕೇರಿಯಲ್ಲಿ ಸಂತ್ರಸ್ತರ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರಕೃತಿ ವಿಕೋಪ ಪರಿಹಾರ ಹೋರಾಟ ಸಮಿತಿ ಘೋಷಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎಂ.ಬಿ. ದೇವಯ್ಯ ಅವರು, ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸುವುದರೊಂದಿಗೆ ಇತರ ಪರಿಹಾರ ಕಾರ್ಯಕ್ರಮಗಳನ್ನೂ ರೂಪಿಸಬೇಕೆಂದು ಸಮಿತಿ ಒತ್ತಾಯಿಸುತ್ತಲೇ ಬಂದಿದ್ದು, ಈ ಸಂಬಂಧವಾಗಿ ಜಿಲ್ಲಾಡಳಿತ, ಸರಕಾರ ಹಾಗೂ ಸ್ವತಃ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ನಿವೇಶನಕ್ಕೆ ಜಾಗ ಗುರುತಿಸುವುದು, ಮನೆ ನಿರ್ಮಿಸಿಕೊಡುವುದನ್ನು ಬಿಟ್ಟು ಇತರ ಯಾವುದೇ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ಆರೋಪಿಸಿದರು.

Advertisement

ಪ್ರಕೃತಿ ವಿಕೋಪ ಸಂಭವಿಸಿದ ಪ್ರದೇಶಗಳ ಹೂಳೆತ್ತುವುದು, ಸಂತ್ರಸ್ತರ ಮನೆಗಳಿಗೆ ರಸ್ತೆ ನಿರ್ಮಿಸುವುದು, ವಿದ್ಯಾಭ್ಯಾಸಕ್ಕೆ ಸೂಕ್ತ ವ್ಯವಸ್ಥೆ ಮಾಡುವುದು ಸೇರಿದಂತೆ ಆದ್ಯತೆಯ ಕಾರ್ಯಕ್ರಮಗಳ ಬಗ್ಗೆ ಸರಕಾರ ಇಂದಿಗೂ ನಿರ್ಲಕ್ಷ್ಯ ವಹಿಸಿದೆ. ಮುಂದಿನ ಎಪ್ರಿಲ್‌-ಮೇ ತಿಂಗಳು ಗಳಲ್ಲಿ 3-4 ಮಳೆಯಾದರೆ ಪ್ರಕೃತಿ ವಿಕೋಪ ಸಂಭವಿಸಿದ ಪ್ರದೇಶಗಳಲ್ಲಿ ಪ್ರಸಕ್ತ ಉಳಿದುಕೊಂಡಿರುವ ಗ್ರಾಮಸ್ಥರು ಗ್ರಾಮವನ್ನೇ ತೊರೆಯಬೇಕಾದ ಪರಿಸ್ಥಿತಿ ಇದೆ ಎಂದು ದೇವಯ್ಯ ಆತಂಕ ವ್ಯಕ್ತಪಡಿಸಿದರು. 

ಸುಮಾರು 840 ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಸರಿಸುಮಾರು 8 ತಿಂಗಳುಗಳೇ ಬೇಕಾಗಲಿದೆ. ಈ ನಡುವೆ ಡಿ.30ರೊಳಗೆ ಪರಿಹಾರ ಕೇಂದ್ರದಲ್ಲಿರುವವರು ಖಾಲಿ ಮಾಡಬೇಕು ಎಂದು ಜಿಲ್ಲಾಡಳಿತ ಹೇಳಿದ್ದು, ಈ ಸಂತ್ರಸ್ತರಿಗೆ ಮಾಸಿಕ 10 ಸಾವಿರ ರೂ.ಗಳನ್ನು ನೀಡುವುದಾಗಿ ಹೇಳಿದೆ. ಆದರೆ ಅಷ್ಟು ಕುಟುಂಬಗಳಿಗೆ ಬಾಡಿಗೆ ಮನೆ ದೊರಕುವುದು ಕಷ್ಟಸಾಧ್ಯವಾಗಿದ್ದು, ಒಂದು ಲೆಕ್ಕದಲ್ಲಿ ಸರಕಾರವೇ ಸಂತ್ರಸ್ತರನ್ನು ಬೀದಿಗೆ ಎಸೆಯುವ ಕೆಲಸ ಮಾಡುತ್ತಿದೆ ಎಂದು ದೇವಯ್ಯ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯದರ್ಶಿ ಕುಂಬುಗೌಡನ ಪ್ರಸನ್ನ ಹಾಗೂ  ಅರವಿಂದ್‌ ಸುರೇಂದ್ರ ಉಪಸ್ಥಿತರಿದ್ದರು.

ಸಂಪಾಜೆ ಹೋಬಳಿಯಲ್ಲಿ ಮನೆ ಕಳೆದುಕೊಂಢ ಸುಮಾರು 40-50 ಕುಟುಂಬಗಳಿಗೆ ಸರಕಾರ ನೀಡಿದ‌ 3.800ರೂ.ಗಳ ಪರಿಹಾರ ಹೊರತಾಗಿ ಯಾವುದೇ ಸೌಲಭ್ಯ ದೊರಕಿಲ್ಲ. ಪ್ರಾಥಮಿಕ ಪಟ್ಟಿಯಲ್ಲಿ ಹೆಸರು ಇದ್ದ ಈ ಕುಟುಂಬ ಗಳನ್ನು ಜಾಗಕ್ಕೆ ಸಂಬಂಧಿಸಿದ ದಾಖಲೆಗಳಿಲ್ಲ ಎಂಬ ಕಾರಣಕ್ಕೆ ಎರಡನೇ ಪಟ್ಟಿಯಲ್ಲಿ ಕೈಬಿಡಲಾಗಿದೆ. ಆದರೆ ಆ ಕುಟುಂಬಗಳು ಹಲವಾರು ವರ್ಷಗಳಿಂದ ಪಂ.ಗಳಿಗೆ ಕಂದಾಯ ಪಾವತಿಸಿಕೊಂಡು ಬಂದಿದ್ದು, ಆ ಪಂಚಾಯಿತಿಗಳಲ್ಲೇ ದಾಖಲೆಗಳು ಲಭ್ಯವಿದೆ. ಆದರೂ ಸಂತ್ರಸ್ತರನ್ನು ಬೀದಿ ಪಾಲು ಮಾಡುವ ಕಾರ್ಯ ಕಂದಾಯ ಇಲಾಖೆಯಿಂದ ನಡೆಯುತ್ತಿದೆನಿರ್ಮಿಸಿಕೊಡುವಂತಾಗಬೇಕು.
– ಬಾಲಚಂದ್ರ ಕಳಗಿ

Advertisement

Udayavani is now on Telegram. Click here to join our channel and stay updated with the latest news.

Next