Advertisement

Madikeri ಬೈಕ್‌ಗಳ ಢಿಕ್ಕಿ: ಯುವತಿ ಸಾವು

08:41 PM Aug 19, 2023 | Team Udayavani |

ಮಡಿಕೇರಿ: ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ವಿರಾಜಪೇಟೆ – ಅಮ್ಮತ್ತಿ ರಸ್ತೆಯ ಸುಂಕದಕಟ್ಟೆ ಬಳಿ ಸಂಭವಿಸಿದೆ.

Advertisement

ಅಮ್ಮತ್ತಿ ಕೆನರಾ ಬ್ಯಾಂಕ್‌ ಉದ್ಯೋಗಿ, ಕೇರಳದ ತ್ರಿಶೂರ್‌ ಜಿಲ್ಲೆಯ ಅಮೃತಾ (24) ಚಿಕಿತ್ಸೆ ಫ‌ಲಕಾರಿಯಾಗದೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ವ‌ರ್ಷದ ಹಿಂದೆ ಅಮ್ಮತ್ತಿಯ ಕೆನರಾ ಬ್ಯಾಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಮೃತಾ ವಿರಾಜಪೇಟೆ ನಗರದ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next