ಸಾಕು ನಾಯಿ ದಾಳಿ ಮಾಡಿರುವ ಘಟನೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಪ್ರಕರಣ ದಾಖಲು ಈ ನಡುವೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಂಜಗೇರಿ ಪಾರಾಣೆ ಗ್ರಾಮದಲ್ಲಿ ಬುಧವಾರ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯ ಅವರ ಮೇಲೆ ನಡೆದ ಸಾಕುನಾಯಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಬಿ.ಮಾಚಯ್ಯ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.