Advertisement

ಕೊಡಗು ಜಿಲ್ಲೆಯಲ್ಲಿ ನಾಲ್ವರಿಗೆ ಪಾಸಿಟಿವ್‌

12:52 PM Jun 28, 2020 | sudhir |

ಮಡಿಕೇರಿ : ಜಿಲ್ಲೆಯಲ್ಲಿ ಶನಿವಾರ ನಾಲ್ವರಲ್ಲಿ ಕೋವಿಡ್ ಪಾಸಿಟಿವ್‌ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

Advertisement

ಬೆಂಗಳೂರು ಪ್ರಯಾಣದ ಇತಿಹಾಸವಿರುವ 33 ವರ್ಷದ ಮಹಿಳೆ, ಮಡಿಕೇರಿ ತಾಲೂಕು ಮೂರ್ನಾಡು ಬಳಿಯ ಸುಭಾಷ್‌ ನಗರದ ಆರೋಗ್ಯ ಕಾರ್ಯಕರ್ತೆ, ಕೊಡ್ಲಿಪೇಟೆ ಹೋಬಳಿ ಶಿರಂಗಾಲ ಗ್ರಾಮದ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 14 ವರ್ಷದ ಬಾಲಕ ಮತ್ತು ಕುಶಾಲನಗರದ ಹುಲುಸೆ ಗ್ರಾಮದ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕವುಳ್ಳ 8 ವರ್ಷದ ಬಾಲಕಿಗೆ‌ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, ಮೂವರು ಗುಣಮುಖರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next