Advertisement

ವ್ಯಾಪಾರದಲ್ಲಿ ನಷ್ಟ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

10:37 PM Feb 24, 2023 | Team Udayavani |

ಮಡಿಕೇರಿ: ಬಟ್ಟೆ ಮಳಿಗೆ ನಡೆಸುತ್ತಿದ್ದ ವ್ಯಾಪಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಾಪೋಕ್ಲು ಪಟ್ಟಣದಲ್ಲಿ ನಡೆದಿದೆ.

Advertisement

ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ಹಡ್ಲಹಳ್ಳಿ ಗ್ರಾಮದ ನಿವಾಸಿ ಎಚ್‌.ಕೆ. ಸಂದೀಪ್‌ (40) ಮೃತ ವ್ಯಾಪಾರಿ. ಕಳೆದ 20 ವರ್ಷಗಳಿಂದ ನಾಪೋಕ್ಲುವಿನಲ್ಲಿ ಬಟ್ಟೆ ಮಳಿಗೆ ನಡೆಸುತ್ತಿದ್ದ ಸಂದೀಪ್‌, ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದರು ಎಂದು ಹೇಳಲಾಗಿದೆ.

ನಾಪೋಕ್ಲು ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಶವರು ಶುಕ್ರವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next