ಮಡಿಕೇರಿ: ಸುಂಟಿಕೊಪ್ಪದ ಬಿ.ಎಂ. ರಸ್ತೆಯ ಹೊಟೇಲ್‌ವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಕುಶಾಲನಗರ ಹಾಗೂ ಸುಂಟಿಕೊಪ್ಪ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಂಟಿಕೊಪ್ಪದ ನಿವಾಸಿಗಳಾದ ಅಹಮ್ಮದ್ ಶರೀಫ್ (34) ಹಾಗೂ ಫಯಾಜ್ ಎಂ.ಎಸ್. (34) ಬಂಧಿತರು. ಬಂಧಿತರಿಂದ 400 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಕುಶಾಲನಗರ ವೃತ್ತದ ಡಿವೈಎಸ್‌ಪಿ ಗಂಗಾಧರಪ್ಪ ಆರ್.ವಿ. ಹಾಗೂ ಸಿಪಿಐ ಮಹೇಶ್, ಸುಂಟಿಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಧರ್ ಅವರನ್ನು ಒಳಗೊಂಡ ಸಿಬಂದಿ ತಂಡ ಕಾರ್ಯಾಚರಣೆ ನಡೆಸಿತು.
ಮನವಿ
ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ಜೀವನ ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ಈ ರೀತಿಯ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಠಾಣೆ ಹಾಗೂ ಕೆಎಸ್‌ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ.
Related Articles
ಕಾಫಿ ತೋಟದ ರೈಟರ್ ಆತ್ಮಹತ್ಯೆ
ಮಡಿಕೇರಿ, ಮಾ. 4: ಕಾಫಿ ತೋಟದ ರೈಟರ್‌ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಹೋಬಳಿಯಲ್ಲಿ ಸಂಭವಿಸಿದೆ.
ಸ್ಥಳೀಯ ಕಾಫಿ ತೋಟವೊಂದರಲ್ಲಿ ರೈಟರ್ ಆಗಿದ್ದ ಶಾಮ್ ರೈ (41) ಮೃತ ವ್ಯಕ್ತಿ. ತೋಟದ ಲೈನ್ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.