ಮಡಿಕೇರಿ : ಹುಲಿಯ 4 ಉಗುರುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.
ಗುಂಡ್ಲುಪೇಟೆ ಮೂಲದ ಕುಮಾರ ಹಾಗೂ ವಿನು ಬಂಧಿತ ಆರೋಪಿಗಳು.
ಮಡಿಕೇರಿ-ಮೈಸೂರು ರಾಜ್ಯ ಹೆದ್ದಾರಿಯ ಚೈನ್‌ಗೇಟ್ ಬಳಿಯಲ್ಲಿರುವ ಬಸ್ ನಿಲ್ದಾಣದ ಎಡ ಬದಿಯಲ್ಲಿ ಇಬ್ಬರು ಹುಲಿಯ 4 ಉಗುರುಗಳನ್ನು ಅಕ್ರಮವಾಗಿ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಡಿಕೇರಿ ತಾಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳಕ್ಕೆ ಖಚಿತ ಮಾಹಿತಿ ಲಭಿಸಿತ್ತು. ಇದನ್ನು ಆಧರಿಸಿ ಸಿಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 4 ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರೀಕ್ಷಕ ಕೆ.ವಿ. ಶರತ್‌ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್.ಟಿ. ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬಂದಿ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಹಾಗೂ ಮಂಜುನಾಥ್ ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ : ‘ವಿವಿಐಪಿ ಸಂಸ್ಕೃತಿಗೆ ಅವಕಾಶವೇ ಇಲ್ಲ’ : ಹ್ಯಾಂಡ್ ಪಂಪ್‌ನಲ್ಲೇ ಸ್ನಾನ ಮಾಡಿದ ಉ.ಪ್ರ ಸಚಿವ