Advertisement

ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ

01:19 PM Aug 10, 2022 | Team Udayavani |

ಮಡಿಕೇರಿ : ದಂಪತಿಯ ನಡುವೆ ನಡೆದ ಕಲಹದಲ್ಲಿ ಪತಿ ಹಾರಿಸಿದ ಗುಂಡು ತಗುಲಿ ಪತ್ನಿ ಸಾವನ್ನಪ್ಪಿದ ಘಟನೆ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಚೇರಳ ಶ್ರೀಮಂಗಲ ಗ್ರಾಮದಲ್ಲಿ ನಡೆದಿದೆ.

Advertisement

ಬಟ್ಟೀರ ಷಷ್ಮ (44) ಎಂಬುವವರು ಗುಂಡೇಟಿನಿಂದ ಮೃತಪಟ್ಟ ಮಹಿಳೆ, ಪತಿ ಬಟ್ಟೀರ ಗೋಪಾಲ (ಕಿಶನ್) ಗುಂಡು ಹಾರಿಸಿದ ಆರೋಪಿ.

ಮಂಗಳವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಘಟನೆ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿ ಗೋಪಾಲನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ

Advertisement

Udayavani is now on Telegram. Click here to join our channel and stay updated with the latest news.

Next