Advertisement

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ

01:24 AM Sep 30, 2019 | Sriram |

ಮಡಿಕೇರಿ: ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ರವಿವಾರ ಆರಂಭಗೊಂಡಿದೆ. ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ ಶ್ರೀಕೋಟೆ ಮಾರಿಯಮ್ಮ ಕರಗಗಳ ನಗರ ಸಂಚಾರದ ಮೂಲಕ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದೆ.

Advertisement

ಕರಗೋತ್ಸವ ಆರಂಭದ ಸಂದರ್ಭ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್‌, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯರಾದ ಎಂ.ಪಿ.ಸುನಿಲ್‌ ಸುಬ್ರಮಣಿ, ಶಾಂತೆಯಂಡ ವೀಣಾಅಚ್ಚಯ್ಯ, ಜಿಲ್ಲಾ ಧಿ ಕಾ ರಿ ಅನೀಸ್‌ ಕಣ್ಮಣಿ ಜಾಯ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸುಮನ್‌ ಡಿ. ಪನ್ನೇಕರ್‌ ಮೊದಲಾ ದ ವ ರು ಹಾಜರಿದ್ದರು.

ಕರಗ ಉತ್ಸವಕ್ಕೆ ಸುಮಾರು 225 ವರ್ಷಗಳ ಇತಿಹಾಸವಿದ್ದು, ರಾಜರ ಆಳ್ವಿಕೆಯ ಕಾಲದಿಂದಲೇ ಈ ಆಚರಣೆ ನಡೆಯುತ್ತಿದೆ. ಗೌಳಿ ಸಮುದಾಯದ ಪೂಜಾರಿ ಮನೆತನದವರು ಈ ಕರಗೋತ್ಸವವನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷ.

ಸೆ. 30ರಿಂದ ಅ. 3ರ ವರೆಗೆ ನಗರ ಪ್ರದಕ್ಷಿಣೆ ಮಾಡಲಿರುವ ನಾಲ್ಕು ಕರಗಗಳು ವಿಜಯ ದಶಮಿಯಂದು ರಾತ್ರಿ ರಾಜಬೀದಿಯಲ್ಲಿ ನಡೆಯುವ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ. ಅ. 9ರಂದು ಬೆಳಗ್ಗೆ ಜಾವ ಬನ್ನಿ ಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ಕರಗಗಳು ದಸರಾ ಮಹೋತ್ಸವಕ್ಕೆ ತೆರೆ ಎಳೆಯಲಿವೆ.

Advertisement

Udayavani is now on Telegram. Click here to join our channel and stay updated with the latest news.

Next