Advertisement

ಸೂಕ್ಷ್ಮ ಪ್ರದೇಶಗಳತ್ತ ಹೆಚ್ಚಿನ ಗಮನ ಹರಿಸಿ: ಅನುಬ್ ಕುಮಾರ್‌

12:05 PM May 27, 2019 | Team Udayavani |

ಮಡಿಕೇರಿ: ಸದ್ಯದಲ್ಲಿಯೇ ಮುಂಗಾರು ಆರಂಭವಾಗಲಿದ್ದು, ಈಗಾ ಗಲೇ ಗುರುತಿಸಲಾಗಿರುವ ಸೂಕ್ಷ್ಮ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನ ಹರಿಸು ವಂತೆ ನೋಡಲ್‌ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನುº ಕುಮಾರ್‌ ಅವರು ಸೂಚಿಸಿದ್ದಾರೆ.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಮತ್ತು ಮುಂಗಾರು ಸಂಬಂಧ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಗುರುತಿಸಲಾಗಿರುವ ಸೂಕ್ಷ್ಮ ಪ್ರದೇಶಗಳಿಗೆ ನೋಡಲ್‌ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳು ಹಾಗೂ ಪರಿಹಾರ ಬಗ್ಗೆ ಮಾಹಿತಿ ಪಡೆಯಬೇಕು. ರಸ್ತೆ, ವಿದ್ಯುತ್‌ ಸಂಪರ್ಕ, ಕುಡಿಯುವ ನೀರು ಮತ್ತಿತರ ಸೌಕರ್ಯ ಇವೆಯೇ ಎಂಬುದನ್ನು ಗಮನಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನುºಕುಮಾರ್‌ ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಲೋಕೋಪಯೋಗಿ, ಪಂಚಾಯತ್‌ ರಾಜ್‌ ಮತ್ತು ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣ ಗೊಳಿಸುವಂತೆ ವಿ.ಅನುºಕುಮಾರ್‌ ಸೂಚಿಸಿದರು.

ಸದ್ಯದಲ್ಲೇ ಮುಂಗಾರು ಆರಂಭ ವಾಗಲಿದ್ದು, ಈ ಹಿನ್ನೆಲೆ ಜಿಲ್ಲಾಡಳಿತ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಇದುವರೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಜನಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಇತರರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಸಭೆ ಆಹ್ವಾನಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನುºಕುಮಾರ್‌ ಸಲಹೆ ಮಾಡಿದರು.

Advertisement

ಪರಿಹಾರ ಕೇಂದ್ರ ಗುರ್ತಿಸಿಕೊಳ್ಳುವುದು, ಆಸ್ಪತ್ರೆಗಳಲ್ಲಿ ಆ್ಯಂಬ್ಯುಲೆನ್ಸ್‌ ಸೇವೆ, ಔಷಧಿ, ಇತರೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಆಹಾರ ಪೂರೈಕೆಯಿಂದ ಅಡುಗೆ ಅನಿಲ, ಆಹಾರ ದಾಸ್ತಾನು ಮಾಡಿಕೊಳ್ಳಬೇಕು. ಪೊಲೀಸ್‌, ವೈದ್ಯಕೀಯ, ಗೃಹ ರಕ್ಷಕ ದಳ ಸೇವೆಗಳ ಅಗತ್ಯ ಸನ್ನದು ಮಾಡಿಕೊಂಡಿರಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು.

ನೋಡಲ್‌ ಅಧಿಕಾರಿಗಳಾದ ಚಂದ್ರ ಶೇಖರ್‌ ಅವರು ಸೂಕ್ಷ್ಮ ಪ್ರದೇಶಗಳಲ್ಲಿನ ಕುಟುಂಬದವರಿಗೆ ಮೂರು ತಿಂಗಳ ಮಟ್ಟಿಗಾದರೂ ಸೀಮೆಎಣ್ಣೆ ವಿತರಿಸಬೇಕು. ಗರ್ವಾಲೆಯ ಉಪ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಶ್ರುಶ್ರೂಷಕರನ್ನು ನಿಯೋಜಿಸುವುದು, ಮಳೆಗಾಲದಲ್ಲಿ ರಸ್ತೆ ಬಂದ್‌ ಆಗುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಮತ್ತಿತರ ಬೇಡಿಕೆಗಳು ಇವೆ ಎಂದು ಅವರು ಮಾಹಿತಿ ನೀಡಿದರು.

ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಎಸ್‌. ಪಿ. ಸುಮನ್‌ ಡಿ.ಪೆನ್ನೇಕರ್‌, ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಷಂಶುದ್ದೀನ್‌, ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ ಇಬ್ರಾಹಿಂ, ಜಿ.ಪಂ. ಕುಡಿಯುವ ನೀರು ವಿಭಾಗದ ಎಂಜಿನಿಯರ್‌ ರೇವಣ್ಣವರ್‌, ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್‌ ಹೊಳ್ಳ, ನೋಡಲ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಅಣಕು ಪ್ರದರ್ಶನ
ಈಗಾಗಲೇ ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಹಲವು ಕಡೆಗಳಿಗೆ ಭೇಟಿ ನೀಡಲಾಗುತ್ತಿದೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ ಆಗಮಿಸಲಿದ್ದು, ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಹಾಗೆಯೇ ಮೇ 28 ಮತ್ತು 29 ರಂದು ಭಾರತೀಯ ಸೇನೆ, ಪೊಲೀಸ್‌, ಅಗ್ನಿಶಾಮಕ ಇಲಾಖೆ ಇತರೆ ತಂಡದವರು ಭೂಕುಸಿತ ಪ್ರದೇಶವೆಂದು ಗುರ್ತಿಸಲಾಗಿರುವ ಹೆಬ್ಬೆಟಗೇರಿ ಹಾಗೂ ಪ್ರವಾಹ ಪೀಡಿತ ಪ್ರದೇಶವೆಂದು ಗುರ್ತಿಸಲಾಗಿರುವ ಹಟ್ಟಿಹೊಳೆಯಲ್ಲಿ ಅಣಕು ಪ್ರದರ್ಶನ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next