Advertisement

ಮಡಿಕೇರಿ: ಮಳೆ ಮುನ್ನೆಚ್ಚರಿಕೆ ಕ್ರಮದ ಚರ್ಚೆ

11:14 PM Jul 11, 2019 | sudhir |

ಮಡಿಕೇರಿ :ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಆದರೆ ಕಳೆದೆರಡು ದಿನಗಳಿಂದ ಬಲವಾದ ಗಾಳಿ ಬೀಸುತ್ತಿದ್ದು, ಜೊತೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ನಡುವೆ ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಜಿಲ್ಲಾಡಳಿತ ಈಗಾಗಲೇ ಕೈಗೊಂಡಿದ್ದು, ವಿಪತ್ತಿನಿಂದ ಸಂಭವಿಸಬಹುದಾದ ಹಾನಿ ಕಡಿಮೆಗೊಳಿಸುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಯಿತು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.

ತುರ್ತಾಗಿ ಕೊಡಗು ಜಿಲ್ಲೆಗೆ ಸಮಗ್ರ ಪುನರ್‌ ನಿರ್ಮಾಣ, ಹಾನಿ ತಗ್ಗಿಸುವ ಕ್ರಮಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಲು ಮತ್ತು ರಚನಾತ್ಮಕ ಯೋಜನೆ ರೂಪಿಸಲು ವಿಷಯ ತಜ್ಞರು, ಸ್ಥಳೀಯರ ಹಾಗೂ ಸಂಬಂಧಪಟ್ಟವರ ಜೊತೆಗೂಡಿಸಿ, ಕಾರ್ಯಾಗಾರವನ್ನು ಏರ್ಪಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಜೊತೆಗೆ ಶಾಲೆ, ಆಸ್ಪತ್ರೆಗಳಲ್ಲಿ ವಿಪತ್ತು ನಿರ್ವಹಣೆಯ ತರಬೇತಿ ಮತ್ತು ಯೋಜ ನೆಗಳನ್ನು ಜಾರಿಗೊಳಿಸಲು ಚರ್ಚಿ ಸಲಾಯಿತು.

ಗ್ರಾಮೀಣ ಮಟ್ಟದಲ್ಲಿ ರೂಪಿಸುತ್ತಿರುವ ಗ್ರಾಮೀಣ ವಿಪತ್ತು ನಿರ್ವಹಣಾ ಯೋಜನೆಯನ್ನು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಜಿಲ್ಲೆಯ ಸೂಕ್ಷ್ಮ ಗ್ರಾಮ ಪಂಚಾಯತ್‌ಗಳಲ್ಲಿ ಪ್ರಥಮ ಹಂತದಲ್ಲಿ ಇತರ ಗ್ರಾಮ ಪಂಚಾಯತ್‌ಗಳಿಗೆ ವಿಸ್ತರಿಸಿ ಗ್ರಾಮೀಣಾ ಭಿವೃದ್ಧಿಯಲ್ಲಿ ತೊಡಗಿಸಿ ಕೊಳ್ಳುವಂತೆ ಚರ್ಚಿಸಲಾಯಿತು. ಇದರೊಂದಿಗೆ ವಿಪತ್ತು ನಿರ್ವಹಣೆ ಸಂಬಂಧಿಸಿದಂತೆ ಮಹಿಳಾ, ಮಕ್ಕಳ, ಸಮುದಾಯ ಕೇಂದ್ರಿತ ಮತ್ತು ವಿವಿಧ ತರಬೇತಿಗಳನ್ನು ಆಯೋಜಿಸಲು ಸಭೆ ಯಲ್ಲಿ ತೀರ್ಮಾನಿಸಲಾಯಿತು. ವಿಪತ್ತು ಪರಿಹಾರವನ್ನು ಸುಸೂತ್ರ ವಾಗಿ ಅರ್ಹರಿಗೆ ತಲುಪಿಸಲು ಸಹಕಾರವಾಗುವಂತೆ ತಾಲೂಕು ಮಟ್ಟ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಾಯ್ದೆ ಮತ್ತು ಪರಿಹಾರ ಲಭ್ಯತೆಯ ಬಗ್ಗೆ ತರಬೇತಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

Advertisement

ಪ್ರಾಧಿಕಾರದ ಸದಸ್ಯರಾದ ಜಿ.ಪಂ.ಸಿಇಒ ಕೆ.ಲಕ್ಷ್ಮೀ ಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಸ್ನೇಹಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ಆರ್‌ಸಿಎಚ್. ಅಧಿಕಾರಿ ಡಾ| ಆನಂದ್‌, ಪಂಚಾಯತ್‌ ರಾಜ್‌ ಇಲಾಖೆಯ ಎಂಜಿನಿಯರ್‌ ಶ್ರೀಕಂಠಯ್ಯ, ಯುನಿಸೆಫ್ ಸಮಾಲೋಚಕರಾದ ಪ್ರಭಾತ್‌ ಕಲ್ಕೂರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next