Advertisement

ಮಡಿಕೇರಿ: ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ಸಭೆ

01:09 AM Jul 10, 2019 | sudhir |

ಮಡಿಕೇರಿ:ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆಯು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement

ರಾಜ್ಯ ಪಠ್ಯಕ್ರಮದ ಮತ್ತು ಐಸಿಎಸ್‌ಇ. ಪಠ್ಯಕ್ರಮ ಪಾಲನೆ ಮಾಡುತ್ತಿರುವ ಎಲ್ಲ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಪಡೆಯುತ್ತಿರುವ ಶುಲ್ಕದ ವಿವರಗಳನ್ನು ಶಾಲೆಯ ಸೂಚನಾ ಫ‌ಲಕದಲ್ಲಿ ಪ್ರಕಟಿಸುವ ಬಗ್ಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಿ.ಇಡಿ/ಡಿಇಡಿ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರು ಕಡ್ಡಾಯವಾಗಿ ಇರುವ ಬಗ್ಗೆ, ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಕರ್ನಾಟಕ ಮೋಟಾರು ವಾಹನ ನಿಯಮಾವಳಿ 1989ಕ್ಕೆ ತಿದ್ದುಪಡಿ ನಿಯಮ ಪಾಲಿಸುವ ಬಗ್ಗೆ, ಶಾಲೆಗಳಲ್ಲಿ ಮೂಲಸೌಕರ್ಯ ಹಾಗೂ ಕಟ್ಟಡದ ಸುರಕ್ಷತೆಗೆ ಸಂಬಂಧಿಸಿದಂತೆ ಸಮಿತಿ ಯಿಂದ ನಿರ್ಬಂಧ‌ ವಹಿಸುವ ಬಗ್ಗೆ ಮತ್ತು ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡುವ ಬಗ್ಗೆ, ಅನುದಾನ ರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳಿಗೆ ಸೇವಾಭದ್ರತೆ ಒದಗಿಸುವ ಬಗ್ಗೆ ಹಾಗೂ ವಿದ್ಯಾರ್ಥಿಗಳ ಶುಲ್ಕದ ವಿವರದ ಬಗ್ಗೆ ಚರ್ಚೆ ನಡೆಯಿತು.

ಶಾಲಾ-ಕಾಲೇಜುಗಳಲ್ಲಿ ವಿದ್ಯಾ ರ್ಥಿಗಳ ಪ್ರವೇಶಕ್ಕೆ ಹೆಚ್ಚಿನ ಶುಲ್ಕ ಪಡೆಯುವುದು ಸೇರಿದಂತೆ ವಿವಿಧ ಶೈಕ್ಷಣಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಅಥವಾ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಗೆ ಮನವಿ ಅಥವಾ ದೂರು ಸಲ್ಲಿಸಬಹುದಾಗಿದೆ. ವಿವಿಧ ವಿಚಾರಗಳ ಕುರಿತು ಸಭೆ ನಡೆಯಿತು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಾಯತ್ರಿ, ನಾಗರಾಜಯ್ಯ, ಶ್ರೀಶೈಲ ಬೀಳಗಿ, ದೈಹಿಕ ಶಿಕ್ಷಣ ಅಧಿಕಾರಿ ವೆಂಕಟೇಶ್‌, ಜಿಲ್ಲಾ ಪಂಚಾಯತ್‌ಸಹಾ ಯಕ ಕಾರ್ಯದರ್ಶಿ ಬಾಬು, ಜಿ.ಪಂ.ಇಇ ಶ್ರೀಕಂಠಯ್ಯ, ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next