Advertisement

ಕೊಡಗು: ಮತ್ತೆ ಅರಳಿತು ಕಮಲ

06:00 AM May 16, 2018 | Team Udayavani |

ಮಡಿಕೇರಿ: ಎರಡೂ ಕ್ಷೇತ್ರಗಳಲ್ಲಿ ಗೆಲುವಿನ ನಗು ಬೀರುವ ಮೂಲಕ ಬಿಜೆಪಿಯ ಭದ್ರಕೋಟೆ ಕೊಡಗಿನಲ್ಲಿ ಪಕ್ಷ ಸುಭದ್ರವಾಗಿದೆ ಎನ್ನುವುದನ್ನು ಕಾರ್ಯಕರ್ತರು ಮತ್ತೆ ಸಾಬೀತು ಪಡಿಸಿದ್ದಾರೆ. ಮಡಿಕೇರಿ, ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತೆ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಜಿಲ್ಲೆ ಕಮಲದ ಭದ್ರಕೊಟೆ ಎನ್ನುವುದನ್ನು ಮತ್ತೂಮ್ಮೆ ನಿರೂಪಿಸಿದೆ. ಬಿಜೆಪಿ ಭದ್ರಕೋಟೆ ಭೇದಿಸುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪ್ರಯತ್ನಗಳು ಸಂಪೂರ್ಣವಾಗಿ ವಿಫ‌ಲವಾಗಿವೆ.

Advertisement

ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎಂ.ಪಿ. ಅಪ್ಪಚ್ಚು ರಂಜನ್‌ ಅವರು ಗೆಲುವು ಸಾಧಿಸುವ ಮೂಲಕ ಸತತ 5ನೇ ಬಾರಿ ಹಾಗೂ ವೀರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರು ಗೆಲುವು ಸಾಧಿಸುವ ಮೂಲಕ 4ನೇ ಬಾರಿ ವಿಧಾನಸಭೆಯ ಮೆಟ್ಟಿಲೆೇರಿದ ಸಾಧನೆ ಮಾಡಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆಯ ಬಳಿಕ ಮಡಿಕೇರಿ ಮತ್ತು ವೀರಾಜಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಹ್ಯಾಟ್ರಿಕ್‌ ಗೆಲುವಿನ ಸಾಧನೆ ಮಾಡಿರುವುದು ಗಮನಾರ್ಹ.

ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಎಂ.ಪಿ. ಅಪ್ಪಚ್ಚು ರಂಜನ್‌ 70,631 ಮತಗಳ‌ನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದು, ಎದುರಾಳಿ ಬಿ.ಎ. ಜೀವಿಜಯ 54,616 ಮತಗಳನ್ನಷ್ಟೆ ಪಡೆಯಲು ಶಕ್ತರಾಗುವ ಮೂಲಕ 16,015 ಮತಗಳ ಅಂತರದ ಸೋಲನ್ನು ಕಾಣುವಂತಾಯಿತು. ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ಪಿ. ಚಂದ್ರಕಲಾ 38,219 ಮತಗಳನ್ನು ಪಡೆಯುವ ಮೂಲಕ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟಕೊಂಡರು. 

Advertisement

Udayavani is now on Telegram. Click here to join our channel and stay updated with the latest news.

Next