ಮಡಿಕೇರಿ :ಕೊಡಗು ಜಿಲ್ಲಾ ಪೊಲೀಸ್ ವಿಭಾಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯ ಪ್ಪ ಟ್ರೋಪಿ ವಿತರಣಾ ಕಾರ್ಯವು ಮಂಗಳ ವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.
ನಿವೃತ್ತ ಪೊಲೀಸ್ ಅಧೀಕ್ಷಕರಾದ ಎ.ಕೆ.ಸುರೇಶ್ ಅವರು ಪಥಸಂಚಲನ ಪರಿವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕರಿಸಿದ ನಂತರ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳು ಮತ್ತು ಅಧೀನ ಅಧಿಕಾರಿಗಳು ಹಾಗೂ ಸಿಬಂದಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ನಿಷ್ಠೆ, ಬದ್ಧತೆ, ಪ್ರಾಮಾ ಣಿಕತೆ ಇದ್ದಲ್ಲಿ ಉತ್ತಮ ಸೇವೆ ಸಲ್ಲಿಸಬಹುದು ಎಂದು ಅವರು ಹೇಳಿದರು.
ಪೊಲೀಸರು ಪ್ರತಿನಿತ್ಯ ಉತ್ತಮ ಸಾರ್ವ ಜನಿಕ ಸಂಪರ್ಕ ಇಟ್ಟುಕೊಂಡು ಕೆಲಸ ನಿರ್ವಹಿಸಬೇಕು. ಸಾರ್ವಜನಿಕ ಸೇವೆಯೇ ಪ್ರಮುಖ ಎಂಬುದನ್ನು ಅರಿತು ಕೊಂಡು ಕಾರ್ಯನಿರ್ವಹಿಸಬೇಕು. ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯ ಪ್ಪ ಅವರು ಸಿದ್ದಾಪುರ ಠಾಣೆ ಯಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಎ.ಸಿದ್ದಾರ್ಥ ಅವರಿಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಿಸಿ ಮಾತನಾಡಿ ಪೊಲೀಸ್ ಇಲಾಖೆಯ ಸೇವೆ ಶ್ಲಾಘನೀಯ. ಆ ನಿಟ್ಟಿನಲ್ಲಿ ಸಮಾಜ ಮುಖೀಯಾಗಿ ಪೊಲೀಸರು ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು. ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆದ ಪಥ ಸಂಚಲನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪೊಲೀಸರು ಜನಸೇವೆಗೆ ಅರ್ಪಣಾ
ಉತ್ತಮ ಸೇವೆ ಸಲ್ಲಿಸಿದ ಪೊಲೀಸರನ್ನು ಸನ್ಮಾನಿಸಲಾಯಿತು. ಆರ್‌ಪಿಐ ಎಸ್.ರಾಚಯ್ಯ ಅವರು ಪಥಸಂಚಲನದ ನೇತೃತ್ವ ವಹಿಸಿದ್ದರು.
ನಿವೃತ್ತ ಪೊಲೀಸ್ ನಿರೀಕ್ಷಕರಾದ ಎನ್.ಟಿ.ಮಹದೇವ, ಉಪ ಪೊಲೀಸ್ ವರಿಷ್ಠಾಧಿ ಕಾರಿಗಳಾದ ನಾಗಪ್ಪ, ಸುಂದರರಾಜ್, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬಂದಿಗಳು ಇತರರು ಇದ್ದರು. ಡಿಸೋಜ ನಿರೂಪಿಸಿದರು. ನಿವೃತ್ತ ಪೊಲೀಸ್ ಅಧೀಕ್ಷಕರಾದ ಅಪ್ಪಯ್ಯ ವಂದಿಸಿದರು.