Advertisement
ಕಾವೇರಿ ನೀರಾವರಿ ನಿಗಮದ ಮೂಲಕ ಕಾಮಗಾರಿ ಅನುಷ್ಠಾನಗೊಂಡಿದ್ದು, ಒಟ್ಟು 28 ಕೋಟಿ ರೂ.ಗಳಲ್ಲಿ ಸೇತುವೆ ನಿರ್ಮಾಣಗೊಂಡಿದೆೆ. ಈ ಮೇಲ್ಸೇತುವೆ ಭಾಗಮಂಡಲ ಪ್ರವೇಶ ದ್ವಾರದ ಮುಂದಿನಿಂದ ಪ್ರಾರಂಭವಾಗಿ ತಲಕಾವೇರಿ ರಸ್ತೆಯನ್ನು ಸಂಪರ್ಕಿಸುತ್ತದೆ. ಮಾತ್ರವಲ್ಲದೇ ನಾಪೋಕ್ಲು ಕಡೆಗೆ ತೆರಳುವ ಸೇತುವೆ ಬಳಿ ಕೊನೆಗೊಳ್ಳುತ್ತದೆ. ಒಟ್ಟು 880 ಮೀಟರ್ ಉದ್ದವಿದ್ದು, ಮಡಿಕೇರಿ-ಭಾಗಮಂಡಲ, ಭಾಗಮಂಡಲ-ತಲಕಾವೇರಿ, ಭಾಗಮಂಡಲ-ಅಯ್ಯಂಗೇರಿ ಎಂಬಂತೆ ಒಟ್ಟು 3 ಭಾಗಗಳಾಗಿ ವಿಂಗಡಿಸಲಾಗಿದೆ.
Related Articles
ಭಾಗಮಂಡಲ ಮೇಲ್ಸೇತುವೆ ಕಾಮಗಾರಿಯನ್ನು ಅತ್ಯಂತ ಶ್ರಮವಹಿಸಿ ಪೂರ್ಣಗೊಳಿಸಲಾಗಿದೆ. ಮಳೆಗಾಲ ಆರಂಭವಾಗುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ಈಗಾಗಲೇ ಅನುವು ಮಾಡಿಕೊಡಲಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಈ ಮಳೆಗಾಲ ಪ್ರವಾಹ ಬಂದರೂ ಮಡಿಕೇರಿಯಿಂದ ಭಾಗಮಂಡಲ-ತಲಕಾವೇರಿ, ಭಾಗಮಂಡಲ-ನಾಪೋಕ್ಲು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ
Advertisement