ಮಡಿಕೇರಿ: ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ವೈ.ಯು. ಕಾವ್ಯಾ ರಾಷ್ಟ್ರ ಮಟ್ಟದ ಫುಟ್ ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಇವಳು 14 ವರ್ಷ ವಯೋಮಿತಿಯ ಬಾಲಕಿಯರ ಫುಟ್ ಬಾಲ್ ಕ್ರೀಡೆಯಲ್ಲಿ ನಾಯಕಿಯಾಗಿ ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಮಂಗಳೂರಿನ ಬಜಪೆಯಲ್ಲಿ ನಡೆದ ವಿಭಾಗ ಮಟ್ಟದ ಕ್ರೀಡೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗದ ತಂಡದಲ್ಲಿ ಸ್ಥಾನ ಗಳಿಸಿದ್ದಾರೆೆ.
ಅಲ್ಲದೇ ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ರಾಜ್ಯ ಮಟ್ಟದ ಕ್ರಿಡೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆೆ.
ಕಾವ್ಯಾ ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿ ಯಾಗಿದ್ದು, ದೈಹಿಕ ಶಿಕ್ಷಣ ಶಿಕ್ಷಕರಾದ ಬಿ.ಎಲ್. ಸಂದೇಶ್ ತರಬೇತಿ ನೀಡಿದ್ದಾರೆ.