Advertisement

ಮಡಿಕೇರಿ: ಫ‌ಲಾನುಭವಿಗಳ ಜತೆ ರಾಜ್ಯಪಾಲ ಗೆಹ್ಲೋಟ್‌ ಸಂವಾದ

01:21 AM Jul 02, 2022 | Team Udayavani |

ಮಡಿಕೇರಿ: ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಶುಕ್ರವಾರ ಫ‌ಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

Advertisement

ನಗರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಅವರು ಸ್ವಾಗತಿಸಿ, ಸರಕಾರದ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ವಿವಿಧ ಯೋಜನೆಗಳ ಫ‌ಲಾನುಭವಿಗಳು ತಮ್ಮ ಅನುಭವಗಳನ್ನು ರಾಜ್ಯಪಾಲರೊಂದಿಗೆ ಹಂಚಿಕೊಂಡರು.

ಈ ಸಂದರ್ಭ ಮಾತನಾಡಿದ ಗೆಹ್ಲೋಟ್‌ ಅವರು ಕೇಂದ್ರ ಮತ್ತು ರಾಜ್ಯ ಸರಕಾರದ ಹಲವು ಕಾರ್ಯಕ್ರಮಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಉತ್ತಮ ಜೀವನ ಕಟ್ಟಿಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.

ಜನರಲ್‌ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ
ಗೆಹ್ಲೋಟ್‌ ಅವರು ಜನರಲ್‌ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಅಲ್ಲಿನ ಯುದ್ಧ ಟ್ಯಾಂಕ್‌, ಯುದ್ಧ ವಿಮಾನ, ಯುದ್ಧ ಹಡಗು ವೀಕ್ಷಿಸಿದರು.

Advertisement

ಜನರಲ್‌ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಜನರಲ್‌ ತಿಮ್ಮಯ್ಯ ಅವರ ಬಾಲ್ಯದ ಜೀವನ, ವಿದ್ಯಾಭ್ಯಾಸ, ಸೇನಾ ಕ್ಷೇತ್ರದಲ್ಲಿನ ಸಾಧನೆ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next