Advertisement
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಆರೋಪಿಯನ್ನು ಶೀಘ್ರ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
Related Articles
Advertisement
ಈ ಬಗ್ಗೆ ಮಾಹಿತಿ ತಿಳಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ 18 ವರ್ಷದ ನಂತರ ವಿವಾಹ ಮಾಡುವಂತೆ ಕಾನೂನಿನ ಅರಿವು ಮೂಡಿಸಿದ್ದರು. ನಂತರ ಎರಡೂ ಮನೆಯವರು ಮೀನಾಳಿಗೆ 18 ವರ್ಷ ತುಂಬಿದ ಮೇಲೆ ವಿವಾಹ ಮಾಡಲು ನಿಶ್ಚಿಯಿಸಿದರು.
ಇದರಿಂದ ಕುಪಿತಗೊಂಡ ಪ್ರಕಾಶ್ ಸಂಜೆ ವೇಳೆಗೆ ಮೀನಾಳ ಮನೆಗೆ ಬಂದು ಆಕೆಯ ತಂದೆ, ತಾಯಿ ಮೇಲೆ ಹಲ್ಲೆ ಮಾಡಿದ್ದಾನೆ. ನಂತರ ಮೀನಾಳನ್ನು ಸ್ವಲ್ಪ ದೂರ ಎಳೆದೊಯ್ದು ತಲೆಯನ್ನು ಕತ್ತರಿಸಿ ತೆಗೆದುಕೊಂಡು ಹೋಗಿದ್ದಾನೆ ಎಂದು ಎಸ್‌ಪಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.
ಆರೋಪಿ ಪ್ರಕಾಶ್ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಚುರುಕುಗೊಳಿಸಲಾಗಿದೆ. ಮೃತೆ ಮೀನಾ ತಂದೆ, ತಾಯಿ, ಮೂವರು ಸಹೋದರಿಯರು ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾಳೆ. ಮೀನಾ ಕೊನೆಯ ಪುತ್ರಿಯಾಗಿದ್ದಾಳೆ.