Madikeri: ತಲಕಾವೇರಿಯಲ್ಲಿ ಅ.17ಕ್ಕೆ ಪವಿತ್ರ ತೀರ್ಥೋದ್ಭವ
Team Udayavani, Oct 16, 2024, 7:21 AM IST
ಮಡಿಕೇರಿ: ಕಾವೇರಿಯ ಉಗಮ ಸ್ಥಾನ ತಲಕಾವೇರಿ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ. 17ರ ಬೆಳಗ್ಗೆ 7.40ಕ್ಕೆ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರಗಲಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ| ಮಂತರ್ ಗೌಡ ಮುಂತಾದವರು ಪಾಲ್ಗೊಳ್ಳಲಿದ್ದಾರೆ.
ಪೊಲೀಸ್ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಭಾಗಮಂಡಲದಿಂದ ತಲಕಾವೇರಿಗೆ ಹಾಗೂ ತಲಕಾವೇರಿಯಿಂದ-ಭಾಗಮಂಡಲಕ್ಕೆ 15 ಬಸ್‌ಗಳು ಓಡಾಡಲಿವೆ.
ಮದ್ಯ ಮಾರಾಟ ನಿಷೇಧ
ತಲಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಅ. 16 ಮತ್ತು 17ರಂದು ತಲಕಾವೇರಿ, ಭಾಗಮಂಡಲ ಮತ್ತು ಚೇರಂಬಾಣೆ ಗ್ರಾಮದ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ರೀತಿಯ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು
Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ
BBK11: ಹನುಮಂತುಗೆ 5 ಕೋಟಿ ವೋಟ್ಸ್ ಕೂಡ ಕಡಿಮೆನೇ.. ತ್ರಿವಿಕ್ರಮ್
ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು
Mangaluru: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ಸೆಟ್ ನಲ್ಲಿ ಅಗ್ನಿ ಅವಘಡ…