Advertisement

Madikeri: ತಲಕಾವೇರಿಯಲ್ಲಿ ನಾಳೆ ಪವಿತ್ರ ತೀರ್ಥೋದ್ಭವ : ಡಿಸಿಎಂ ಭಾಗಿ

09:25 PM Oct 15, 2024 | Team Udayavani |

ಮಡಿಕೇರಿ: ಕಾವೇರಿಯ ಉಗಮ ಸ್ಥಾನ ತಲಕಾವೇರಿ¿ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ನಾಳೆ(ಅ. 17) ಬೆಳಗ್ಗೆ 7.40ಕ್ಕೆ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರಗಲಿದೆ.

Advertisement

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಎನ್‌.ಎಸ್‌. ಭೋಸರಾಜು, ರಾಮಲಿಂಗಾ ರೆಡ್ಡಿ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕರಾದ ಎ.ಎಸ್‌. ಪೊನ್ನಣ್ಣ, ಡಾ. ಮಂಥರ್‌ ಗೌಡ ಪಾಲ್ಗೊಳ್ಳಲಿದ್ದಾರೆ.

ಪವಿತ್ರ ತೀರ್ಥೋದ್ಭವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸಿದ್ಧತೆಗಳು ಭರದಿಂದ ಸಾಗಿವೆ. ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಮಡಿಕೇರಿ, ಭಾಗಮಂಡಲ, ತಲಕಾವೇರಿಗೆ ಹೋಗುವ ರಸ್ತೆಯನ್ನು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next