Advertisement
ಕೊಡಗು ಜಿಲ್ಲೆಯ ಹೆಗ್ಗಳ ಗ್ರಾಮದ ನಾಸಿರುದ್ದೀನ್ ಎಂ.ಯು(26), ಎಡಪಾಲ ಗ್ರಾಮದ ಯಾಹ್ಯಾ ಸಿ.ಹೆಚ್(28), ಕುಂಜಿಲ ಗ್ರಾಮದ ಅಕನಾಸ್(26), ಬೇಟೋಳಿ ಗ್ರಾಮದ ವಾಜಿದ್(26), ಕೇರಳದ ಕಣ್ಣೂರು ಗ್ರಾಮದ ರಿಯಾಜ್(44), ಕಾಸರಗೋಡಿನ ಮೆಹರೂಫ್(37) ಹಾಗೂ ರವೂಫ್(28) ಬಂಧಿತ ಆರೋಪಿಗಳು.
Related Articles
Advertisement
ಆರೋಪಿ ಯಾಹ್ಯಾ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೈಡ್ರೋ ಗಾಂಜಾವನ್ನು ತಂದು ನಂತರ ಅಲ್ಲಿಂದ ನಾಸೀರುದ್ದೀನ್, ಆಕನಾಸ್, ಅಜ್ಜಲ್, ರಿಯಾಜ್ ಹಾಗೂ ವಾಜೀದ್ ಅವರೊಂದಿಗೆ ಕಾರಿನಲ್ಲಿ ಗೋಣಿಕೊಪ್ಪದ ಬೆಳ್ಳಿಯಪ್ಪ ರೆಸಿಡೆನ್ಸಿಯೊಂದಕ್ಕೆ ಬಂದು ತಂಗುತ್ತಾರೆ. ಕೇರಳದ ಮೆಹರೂಫ್ ನ ಮುಂದಿನ ನಿರ್ದೇಶನಕ್ಕಾಗಿ ಕಾಯುತ್ತಿದ್ದ ತಂಡ ಒಂದೇ ಸ್ಥಳದಲ್ಲಿ ಇದ್ದರೆ ಯಾರಿಗಾದರೂ ಅನುಮಾನ ಬರುತ್ತದೆ ಎನ್ನುವ ಕಾರಣಕ್ಕೆ ಸ್ಥಳ ಬದಲಾವಣೆಗೆ ಮುಂದಾಗುತ್ತಾರೆ.
ವಿರಾಜಪೇಟೆಯಿಂದ ಮಡಿಕೇರಿಗೆ ಬರುವಾಗ ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸ್ ಅಧಿಕಾರಿಗಳು ವಿರಾಜಪೇಟೆ ರಸ್ತೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು.
ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಆರೋಪಿ ಆರ್ಜಿ ಗ್ರಾಮದ ರವೂಫ್ ನನ್ನು ಬೆಂಗಳೂರಿನ ಸಂಜಯನಗರ ಲೇಔಟ್ ನಿವಾಸದಲ್ಲಿ ಬಂಧಿಸಲಾಗಿದೆ.
ಪ್ರಕರಣದ ಪ್ರಮುಖ ಆರೋಪಿಯಾದ ಕಾಸರಗೋಡಿನ ಮೆಹರೂಫ್ ಥೈಲ್ಯಾಂಡ್ ದೇಶದ ಬ್ಯಾಂಕಾಕ್ ಗೆ ಪರಾರಿಯಾಗಲು ಯತ್ನಿಸಿದಾಗ ಕೇರಳದ ಎರ್ನಾಕುಲಂ ಜಿಲ್ಲೆಯ ಎಸ್.ಪಿ. ವೈಭವ್ ಸಕ್ಸೇನಾ ಹಾಗೂ ಕೊಚ್ಚಿನ್ ಏರ್ ಪೋರ್ಟ್ ಇಮಿಗ್ರೇಶನ್ ಅಧಿಕಾರಿಯಾದ ಕೃಷ್ಣರಾಜ್ ಅವರ ಸಹಕಾರದಿಂದ ಬಂಧಿಸಲಾಯಿತು ಎಂದು ಎಸ್‌ಪಿ ವಿವರಿಸಿದರು.
ಅಧಿಕ ನಶೆಇದೊಂದು ಅಪರೂಪದ ಪ್ರಕರಣವಾಗಿದ್ದು, ಹೈಡ್ರೋ ಗಾಂಜಾ ಸಾಮಾನ್ಯ ಗಾಂಜಾಕ್ಕಿಂತ ಹೆಚ್ಚು ನಶೆಯನ್ನು ಕೊಡುವ ಮಾದಕ ದ್ರವ್ಯವಾಗಿದೆ ಮತ್ತು ದುಬಾರಿ ಬೆಲೆಯದ್ದಾಗಿದೆ. ಇದನ್ನು ವಿಭಿನ್ನ ರೀತಿಯ ಕೃತಕ ಬೆಳಕನ್ನು ಉಪಯೋಗಿಸಿ ಹವಾ ನಿಯಂತ್ರಿತ ಕೊಠಡಿಯಲ್ಲಿ ಬೆಳೆಸಲಾಗುತ್ತದೆ ಎಂದು ಎಸ್‌ಪಿ ಕೆ.ರಾಮರಾಜನ್ ಮಾಹಿತಿ ನೀಡಿದರು. ಈ ಪ್ರಕರಣವನ್ನು ಕೊಡಗು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್ ಕೆ.ಎಸ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ರವಿಕುಮಾರ್ ಎಸ್. ಹಾಗೂ ಮಡಿಕೇರಿ ನಗರ ವೃತ್ತ ನಿರೀಕ್ಷಕ ರಾಜು ಪಿ.ಕೆ. ಅವರ ನೇತೃತ್ವದ ತಂಡ ಸತತ 72 ಗಂಟೆಗಳ ಕಾಲ ತನಿಖೆಯಲ್ಲಿ ತೊಡಗಿಸಿಕೊಂಡು ಯಶಸ್ವಿಯಾಗಿ ಬೇಧಿಸಿದೆ. ಡಿ.ಸಿ.ಆರ್.ಬಿ ಘಟಕದ ಪೊಲೀಸ್ ನಿರೀಕ್ಷಕ ಮೇದಪ್ಪ ಐ.ಪಿ, ಡಿವೈಎಸ್‌ಪಿ ಮಹೇಶ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಯೋಗೇಶ್, ನಿರಂಜನ್, ಶರತ್ ರೈ, ರವಿಕುಮಾರ್, ನಾಪೋಕ್ಲು ಪೊಲೀಸ್ ಠಾಣೆಯ ಉಪನಿರೀಕ್ಷಕ ಮಂಜುನಾಥ್, ಸಿಬ್ಬಂದಿಗಳಾದ ಪ್ರದೀಪ್ ಕುಮಾರ್, ಮುರುಳಿ, ನವೀನ್ ಜಿಲ್ಲಾ ಪೊಲೀಸ್ ಘಟಕದ ತಾಂತ್ರಿಕ ಸಿಬ್ಬಂದಿಗಳಾದ ರಾಜೇಶ್ ಸಿ.ಕೆ ಹಾಗೂ ಪ್ರವೀಣ್ ಕುಮಾರ್ ಕಾರ್ಯಾಚರಣೆ ನಡೆಸಿದರು.