Advertisement
ಉಪವಿಭಾಗಾಧಿಕಾರಿ ಜವರೇ ಗೌಡ, ಮುಖ್ಯ ಕಾರ್ಯ ನಿರ್ವ ಹಣಾ ಧಿಕಾರಿ ಲಕ್ಷ್ಮೀಪ್ರಿಯ, ಮಡಿಕೇರಿ ಎಸಿಎಫ್ ನೆಹರೂ ಮತ್ತು ಗಣಿ ಮತ್ತು ಭೂ ವಿಜ್ಞಾನಿಗಳು ಸಮಿತಿಯಲ್ಲಿದ್ದು, ತನಿಖೆ ಪ್ರಗತಿಯಲ್ಲಿದೆ.
ಪ್ರಕರಣದ ಬಗ್ಗೆ ವಿಳಂಬ ಮಾಡದೆ ಶೀಘ್ರ ತನಿಖೆ ನಡೆಸಿ ಸತ್ಯಾಂಶ ಬಯಲು ಗೊಳಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ತಲಕಾವೇರಿ ಮೂಲ ಸ್ವರೂಪ ರಕ್ಷಣಾ ವೇದಿಕೆ ಮತ್ತು ಭಾಗಮಂಡಲ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮಸ್ಥರಲ್ಲಿ ಆತಂಕ
ಮಳೆಯಿಂದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಅಪಾಯಕಾರಿ ಬಿರುಕು ಕಾಣಿಸಿಕೊಳ್ಳುತ್ತಿರುವುದರಿಂದ ವಿವಾದಿತ ಪ್ರದೇಶದ ಗ್ರಾಮಸ್ಥರಲ್ಲೂ ಆತಂಕ ಸೃಷ್ಟಿಯಾಗಿದೆ. ಸೂಕ್ಷ್ಮ ಅರಣ್ಯ ಪ್ರದೇಶದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ, ಅಲ್ಲದೆ ಕೆರೆಯೊಂದನ್ನು ಕೂಡ ನಿರ್ಮಿಸಲಾಗಿದೆ. ಈ ಕೆರೆಯಿಂದಲೇ ಮುಂದೊಂದು ದಿನ ಅಪಾಯ ಕಾದಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.
Related Articles
ಬೆಟ್ಟ ವಿರೂಪಗೊಳಿಸಿ ಕಾಟೇಜ್ ನಿರ್ಮಾಣ, ರಸ್ತೆ, ಕೆರೆ ಹಾಗೂ ಇನ್ನಿತರ ಕಾಮಗಾರಿ ನಡೆಸಿದ್ದ ಮಡಿಕೇರಿ ಕಂದಾಯ ಇಲಾಖೆ ಉಪನಿರೀಕ್ಷಕ ಹಾಗೂ ಅವರ ಪುತ್ರನ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ, ಕರ್ನಾಟಕ ಜೀವ ವೈವಿಧ್ಯ ಅಧಿನಿಯಮ ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಈ ಪ್ರಕರಣದ ಕುರಿತು ತಲಕಾವೇರಿ ಮೂಲ ಸ್ವರೂಪ ರಕ್ಷಣಾ ವೇದಿಕೆ ಅರಣ್ಯ ಇಲಾಖೆಗೆ ದೂರು ನೀಡಿತ್ತು.
Advertisement