Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ತಲಕಾವೇರಿಯ 100 ಮಿ.ಲೀ. ತೀರ್ಥ, ತ್ರಿವೇಣಿ ಸಂಗಮ ಭಾಗಮಂಡಲದ ಶ್ರೀ ಭಗಂಡೇಶ್ವರ ದೇಗುಲದ ಪಂಚಕಜ್ಜಾಯ, ಕುಂಕುಮ, ಗಂಧವನ್ನು ಒಳಗೊಂಡ ಪ್ರಸಾದದ ಡಬ್ಬಿಯನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.
ವೆಬ್‌ಸೈಟ್ ಮೂಲಕ ಬರುವ ಬೇಡಿಕೆಗೆ ಅನುಗುಣವಾಗಿ ಪ್ರಸಾದ ವನ್ನು ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ. ದೇಶದ ಒಳಗಿನ ಯಾವುದೇ ಪ್ರದೇಶಕ್ಕೆ ಪ್ರಸಾದವನ್ನು ತಲುಪಿಸಲಾಗುತ್ತದೆ ಎಂದು ಮಡಿಕೇರಿ ಅಂಚೆ ಕಚೇರಿಯ ಸೂಪರಿಂಟೆಂಡೆೆಂಟ್ ರಮೇಶ್ ಬಾಬು ತಿಳಿಸಿದರು.