Advertisement

ಮಡಿಕೇರಿ: ಕಂದಾಯ ಅಧಿಕಾರಿಗಳ ಸಭೆ 

06:50 AM Jul 31, 2017 | |

ಮಡಿಕೇರಿ : ತೋಟಗಾರಿಕೆ ಇಲಾಖೆ ಪರಿಹಾರ ತಂತ್ರಾಂಶದಲ್ಲಿ ಬಾಕಿ ಇರುವ ಬೆಳೆಹಾನಿ ವಿವರವನ್ನು ಶೀಘ್ರದಲ್ಲಿ ಪೂರ್ಣ ಗೊಳಿಸುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ ಅವರು ಸೂಚನೆ ನೀಡಿದ್ದಾರೆ. 
  
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

Advertisement

ಅಂಗನವಾಡಿಗಳಿಗೆ 15 ದಿನದೊಳಗೆ ಸೂಕ್ತ ಜಾಗವನ್ನು ಗುರುತಿಸುವಂತೆ ಸರ್ವೆ ಅಧಿಕಾರಿ ಯವರೊಂದಿಗೆ ಸಮಾಲೋಚನೆ ಮಾಡಿ ಕಂದಾಯ ನಿರೀಕ್ಷಕರು ವರದಿ ನೀಡಿ ಜಾಗವನ್ನು ನೀಡುವಂತೆ ಕ್ರಮವಹಿಸಬೇಕು ಎಂದರು.

ಅಂಗನವಾಡಿಗಳಿಗೆ ಸಂಬಂಧಿಸಿದಂತೆ ಸರಕಾರಿ ಜಾಗ ಒತ್ತುವರಿಯನ್ನು ಗುರುತಿಸಿ ಮೂರು ತಿಂಗಳೊಳಗೆ ಸರಕಾರದ ಸುಪರ್ದಿಗೆ ಪಡೆದುಕೊಂಡು ಸರ್ವೆ ಕಾರ್ಯವನ್ನು ಪೂರ್ಣ ಗೊಳಿಸುವಂತೆ ಕಂದಾಯ ನಿರೀಕ್ಷಕರಿಗೆ ಸಲಹೆ ನೀಡಿದರು. 

ಅಂಬೇಡ್ಕರ್‌ ಭವನದ ಬಗ್ಗೆ ಸಭೆಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಾಯಾದೇವಿ ಗಲಗಲಿ ಅವರು  ಮಾಹಿತಿ ನೀಡಿ ಶನಿವಾರಸಂತೆ, ಸೋಮವಾರಪೇಟೆ, ಸುಂಟಿಕೊಪ್ಪ, ನಾಪೋಕ್ಲು, ಅಮ್ಮತ್ತಿ, ಹುದಿಕೇರಿ, ಚೆನ್ನಯ್ಯನ ಕೋಟೆ, ಕುಟ್ಟ, ಕದನೂರು, ಕೊಡ್ಲಿಪೇಟೆಯಲ್ಲಿ ಜಾಗ ಬೇಕಿದೆ ಎಂದರು. ಇದಕ್ಕೆ ಜಿಲ್ಲಾಧಿಕಾರಿಯವರು ಒಂದು ವಾರದಲ್ಲಿ ಜಾಗ ಗುರುತಿಸುವಂತೆ ಕಂದಾಯಾಧಿಕಾರಿಗಳಿಗೆ ಸೂಚನೆ ನೀಡಿದರು.
 
ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾಕರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಾತನಾಡಿ, ಸಭೆಗೆ ಹೊಸದಾಗಿ ಕುಶಾಲನಗರದಲ್ಲಿ ಮಂಜೂರಾಗಿರುವ ಮೌಲನಾ ಅಬ್ದುಲ್‌ ಅಜಾದ್‌ ಶಾಲೆಗೆ ಜಾಗದ ಆವಶ್ಯಕತೆ ಬಗ್ಗೆ ಮಾಹಿತಿ ನೀಡಿದರು. 

ಯೋಜನಾ ಸಮನ್ವಯಾಧಿಕಾರಿ ಅವರು ಸಭೆಗೆ ತಿತಿಮತಿಯಲ್ಲಿ ಮೊರಾರ್ಜಿ ಶಾಲೆಗೆ ಜಾಗದ ಆವಶ್ಯಕತೆ ಇದ್ದು, ಆದಿವಾಸಿ ಸಮುದಾಯ ಭವನಕ್ಕೆ 4 ಕೋಟಿ ಮಂಜೂರಾತಿ ದೊರೆತಿದ್ದು, ಒಂದು ಎಕರೆ ಜಾಗದ ಆವಶ್ಯಕತೆ ಇದೆ ಎಂದು ತಿಳಿಸಿದರು. 

Advertisement

ಇದಕ್ಕೆ ಜಿಲ್ಲಾಧಿಕಾರಿ ಅವರು ಗೋಣಿಕೊಪ್ಪ, ವಿರಾಜಪೇಟೆ ವ್ಯಾಪ್ತಿಯಲ್ಲಿ ಸರಕಾರಿ ಜಾಗ ಸಿಗದಿದ್ದರೆ ಖಾಸಗಿಯವರಿಂದ ಖರೀದಿ ಮಾಡುವಂತೆ ಸೂಚಿಸಿದರು.  
 
ಐಟಿಡಿ ಇಲಾಖೆ ಅಧಿಕಾರಿ ಪ್ರಕಾಶ್‌ ಅವರು ದುಬಾರೆ, ಸಿದ್ದಾಪುರ, ತಿತಿಮತಿ ವ್ಯಾಪ್ತಿಯಲ್ಲಿ ಗಿರಿಜನ ಅಭಿವೃದ್ಧಿ ಯೋಜನೆಯಡಿ ಕುಡಿ ಯುವ ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಜಾಗದ ಆವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿ ಅವರಲ್ಲಿ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿದರು. 

ಗ್ರಾಮೀಣ ಗೃಹ ನಿರ್ಮಾಣದಲ್ಲಿ ಹಿಂದೆ ಉಳಿದಿದ್ದು, ಮೂರು ತಾಲೂಕು ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿಗಳು ಸೂಕ್ತ ಕ್ರಮಕೈಗೊಂಡು ವಸತಿ ರಹಿತ ಗ್ರಾಮೀಣ ಭಾಗದ ಜನರಿಗೆ ಸೌಲಭ್ಯ ನೀಡುವಂತೆ ಸೂಚಿಸಿದರು. 

ಕಸ ವಿಲೇವಾರಿಗೆ ಸೂಕ್ತ ಜಾಗವನ್ನು ನಿಗದಿಪಡಿಸಿ ವೈಜ್ಞಾನಿಕ ರೀತಿಯಲ್ಲಿ ಬಳಸಿ ಕೊಳ್ಳುವಂತೆ ಇದೇ ಸಂದರ್ಭ ದಲ್ಲಿ ತಾಲ್ಲೂಕು ಪಂಚಾಯತ್‌ ಕಾರ್ಯನಿರ್ವಹಣಾ ಧಿಕಾರಿಗಳಿಗೆ ಸೂಚನೆ ನೀಡಿದರು. 

ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಮೆಕ್ಕೆಜೋಳ ಬಿತ್ತನೆ ಪೂರ್ಣಗೊಂಡಿದ್ದು, ಭತ್ತದ ನಾಟಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.  ಅಪರ ಜಿಲ್ಲಾಧಿಕಾರಿ ಎಂ. ಸತೀಶ್‌ ಕುಮಾರ್‌ ಅವರು ಜಿಲ್ಲೆಯ ಕೆರೆಗಳ ಸರ್ವೆ ಕಾರ್ಯ ಶೀಘ್ರ ದಲ್ಲಿ ಪ್ರಾರಂಭಿಸುವಂತೆ ಸೂಚಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next