Advertisement

Madikeri: ಮೆಡಿಕಲ್ ಕಾಲೇಜು ಪ್ರಕರಣ: ಆರೋಪಿ ಬಂಧನ

01:03 PM Aug 22, 2023 | Team Udayavani |

ಮಡಿಕೇರಿ: ಕೊಡಗು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ತೆರಳಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಆಟೋ ಚಾಲಕ ಕತ್ತಲೆಕಾಡು ನಿವಾಸಿ ಸಿಜಿಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ  ಭದ್ರತೆ ಲೋಪದ ಬಗ್ಗೆ ಕಾಲೇಜು ವಿದ್ಯಾರ್ಥಿಗಳು ಆ.21ರ ಸೋಮವಾರ  ಪ್ರತಿಭಟನೆ ನಡೆಸಿ ತಮ್ಮ ಅಳಲನ್ನು ತೋಡಿಕೊಂಡಿಕೊಂಡು ಬಳಿಕ ಕಾಲೇಜಿಗೆ ಸೂಕ್ತ ಭದ್ರತೆಯ ಗೇಟ್ ಇಲ್ಲದ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮ ರಾಜನ್ ಮಾರ್ಗದರ್ಶನದಲ್ಲಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿತು. ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ್ದ ಸಿಜಿಲ್ ಈಗ ಮಡಿಕೇರಿ ಗ್ರಾಮಾಂತರ ಪೊಲೀಸರ ಅತಿಥಿಯಾಗಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next