Advertisement
ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ (52) ಬಂಧಿತ ಆರೋಪಿ. ಈತನ ಮನೆ ಮೇಲೆ ದಾಳಿ ಮಾಡಿದಾಗ ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಗ್ರಿಗಳು, 2 ನಾಡ ಬಂದೂಕು (ಎಸ್.ಬಿ.ಬಿ.ಎಲ್) ಮತ್ತು 1 ನಾಡ ಪಿಸ್ತೂಲ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ ಕರಿಕೆ ಚೆತ್ತುಕಾಯ ಗ್ರಾಮದ ಎನ್.ಜೆ. ಶಿವರಾಮ (45), ಪಿರಿಯಾಪಟ್ಟಣದ ಮಾಗಳಿ ಗ್ರಾಮದ ಎಸ್. ರವಿ (35) ಹಾಗೂ ಭಾಗಮಂಡಲ ದೊಡ್ಡಪುಲಿಕೋಟು ಗ್ರಾಮದ ಕೋಟಿ (55) ಅವರನ್ನು ಕೂಡ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅವರ ಬಳಿ ಇದ್ದ ತಲಾ ಒಂದು ನಾಡ ಬಂದೂಕು (ಎಸ್.ಬಿ.ಬಿ.ಎಲ್) ಅನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 5 ನಾಡ ಬಂದೂಕು (ಎಸ್.ಬಿ.ಬಿ.ಎಲ್) ಮತ್ತು 1 ನಾಡ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.
Related Articles
Advertisement