ಮಡಿಕೇರಿ: ವಿರಾಜಪೇಟೆ ನಗರದ ಹೊರ ವಲಯದ ಕೊಮ್ಮೆತ್ತೋಡು ಗ್ರಾಮದ ಮುಖ್ಯರಸ್ತೆಯಲ್ಲಿ ಕಾರು ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ವಿರಾಜಪೇಟೆ-ಸಿದ್ದಾಪುರ ಮುಖ್ಯ ರಸ್ತೆಯ ಕೊಮ್ಮೆತ್ತೋಡು ಬಳಿಯ ಸಂತ ಮರಿಯ ಚರ್ಚ್ ಮುಂಭಾಗದ ತಿರುವಿನಲ್ಲಿ ವಿರಾಜಪೇಟೆಯಿಂದ ಸಿದ್ದಾಪುರಕ್ಕೆ ತೆರಳುತ್ತಿದ್ದ ಗೂಡ್ಸ್ ವಾಹನ ಮತ್ತು ಸಿದ್ದಾಪುರದಿಂದ ವಿರಾಜಪೇಟೆ ನಗರಕ್ಕೆ ಆಗಮಿಸುತ್ತಿದ್ದ ಟೊಯೋಟಾ ಇನೋವಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ವಾಹನಗಳ ಮುಂಭಾಗ ಜಖಂಗೊಂಡಿದೆ. ಗಾಯಗೊಂಡ ಕಾರಿನಲ್ಲಿದ್ದವರನ್ನು ಅಮ್ಮತ್ತಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಮಣಿಪುರದಲ್ಲಿ ಉಗ್ರಗಾಮಿಗಳೊಂದಿಗೆ ಗುಂಡಿನ ಕಾಳಗ: ಕಮಾಂಡೋ ಬಲಿ