ಮಡಿಕೇರಿ: ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮಾಲ್ದಾರೆ ಅವರೆಗುಂದದಲ್ಲಿ ನಿತ್ರಾಣಗೊಂಡಿದ್ದ ಹುಲಿಯನ್ನು ಅರಣ್ಯ ಇಲಾಖೆ ರಕ್ಷಿಸಿ ಮೈಸೂರು ಬಳಿಯ ಕೂರ್ಗಳ್ಳಿಗೆ ಸ್ಥಳಾಂತರಿಸಲಾಗಿದೆ.
12 ವರ್ಷದ ಹುಲಿ ಕೆಲವು ದಿನಗಳ ಹಿಂದೆ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಅದರ ಮೇಲೆ ನಿಗಾ ಇರಿಸಿದ್ದ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡು ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.
ವೈದ್ಯಾಧಿಕಾರಿ ಡಾ| ರಮೇಶ್, ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ಕನ್ನಂಡ ರಂಜನ್ ಅರಿವಳಿಕೆ ಪ್ರಯೋಗಿಸಿದರು. ಆಹಾರ ಸೇವಿಸದೆ ನಿತ್ರಾಣಗೊಂಡಿದ್ದ ಹುಲಿಗೆ ವೈದ್ಯಾಧಿಕಾರಿ ಡಾ| ಚೆಟ್ಟಿಯಪ್ಪ ಹಾಗೂ ಡಾ| ರಮೇಶ್ ಚಿಕಿತ್ಸೆ ನೀಡಿದರು. ಬಳಿಕ ಆರೈಕೆಗಾಗಿ ಕೂರ್ಗಳ್ಳಿಗೆ ಸ್ಥಳಾಂತರಿಸಲಾಯಿತು. ಚೇತರಿಸಿಕೊಂಡ ಬಳಿಕ ಹುಲಿಯನ್ನು ಮೈಸೂರಿನ ಮೃಗಾಲಯಕ್ಕೆ ಬಿಡಲಾಗು ವುದೆಂದು ಅರಣ್ಯ ಅಧಿಕಾರಿ ಶಿವರಾಂ ತಿಳಿಸಿದರು.
ಇದನ್ನೂ ಓದಿ: ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗ-ಬೆಟಗೇರಿಯಲ್ಲಿ ಜಿಯೋ ಟ್ರೂ 5ಜಿ ಸೇವೆ ಆರಂಭ