Advertisement
ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯ ತೀವ್ರತೆ ಜಿಲ್ಲೆಯಾದ್ಯಂತ ಹೆಚ್ಚಿದ್ದು, ಕಾವೇರಿಯ ಉಗಮಸ್ಥಾನವಾದ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆಯಾಗುತ್ತಿದೆ. ಭಾಗಮಂಡಲ ಮತ್ತು ಅಯ್ಯಂಗೇರಿ ರಸ್ತೆಗಳ ಮೇಲೆ ನದಿ ನೀರು ಹರಿಯಲಾರಂಭಿಸಿದ್ದು, ಕಾವೇರಿಯ ನೀರಿನ ಮಟ್ಟ ಹೆಚ್ಚಿದೆ.ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆೆಯ ಹಿನ್ನೆಲೆಯಲ್ಲಿ ಅಂಗನವಾಡಿಗಳು ಸೇರಿದಂತೆ ಶಾಲಾ ಕಾಲೇಜುಗಳಿಗೆ ಜೂ.11 ರಂದು ರಜೆ ಘೋಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Related Articles
Advertisement
ಉಳಿದಂತೆ ಗ್ರಾಮೀಣ ಪ್ರದೇಶಗಳಲ್ಲೂ ಮಹಾಮಳೆಯಿಂದ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಭಾಗಮಂಡಲ, ಕಾಟಕೇರಿ, ಬಿಳಿಗೇರಿ, ಮಾದಾಪುರ ಸೇರಿದಂತೆ ವಿವಿಧ ಭಾಗಗಳಲ್ಲಿ ಮುಖ್ಯ ರಸ್ತೆಯ ಮೇಲೆ ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾುತು.
ಸುಂಟಿಕೊಪ್ಪ ಹೋಬಳಿ ವಿಭಾಗದಲ್ಲಿ ಮರಗಳು ಉರುಳಿ ಬಿದ್ದು ಸಂಚಾರಕ್ಕೆ ತೊಡಕಾಗಿದೆ. ವಿದ್ಯುತ್ ಕಂಬಗಳು ನೆಲಕಚ್ಚಿದ್ದು, ಗ್ರಾಮೀಣ ಪ್ರದೇಶ ಕಾರ್ಗತ್ತಲಿನಲ್ಲಿದೆ.ಹೊಸತೋಟ, ಕಾಜೂರು, ಕೋವರ್‌ಕೊಲ್ಲಿ ಬಳಿಯೂ ಮರಗಳು ರಸ್ತೆಗುರುಳಿವೆ. ಚಳಿ ಗಾಳಿುಂದ ಪ್ರಾಣಿ ಪಕ್ಷಿಗಳು ಕೂಡ ಕಷ್ಟ ಅನುಭವಿಸುತ್ತಿದ್ದು, ಕಾರ್ಮಿಕರು ತೋಟಗಳಲ್ಲಿ ಕಾರ್ಯನಿರ್ವಹಿಸಲಾಗದ ಪರಿಸ್ಥಿತಿ ಇದೆ. ಆದರೆ ಅತಿ ಹೆಚ್ಚು ಮಳೆಯಾಗುವ ಭಾಗಮಂಡಲ ಹಾಗೂ ತಲಕಾವೇರಿ ಪ್ರದೇಶದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಯಥಾಸ್ಥಿತಿ ಇದೆ.
ಶನಿವಾರಸಂತೆ: ಭಾರೀ ಗಾಳಿಗೆ ಮರದ ರೆಂಬೆಯೊಂದು ಬೈಕ್ ಸವಾರನ ಮೇಲೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಗುಡುಗಳಲೆಯಲ್ಲಿ ನಡೆದಿದೆ.
ಹಿತ್ತಲಕೇರಿ ಗ್ರಾಮದ ಗುಂಡಪ್ಪ ಹಾಗೂ ಗೊಪಾಲಪುರದ ಬಾಲು ಅವರುಗಳು ಬೈಕ್‌ನಲ್ಲಿ ಶನಿವಾರಸಂತೆಗೆ ಬಂದು ಮರಳಿ ಹಿತ್ತಲಕೇರಿಗೆ ಹೋಗುವಾಗ ಶನಿವಾರಸಂತೆ-ಸೋಮವಾರಪೇಟೆ ಮುಖ್ಯ ರಸ್ತೆಯ ಗುಡುಗಳಲೆಯಲ್ಲಿ ಒಣಗಿ ನಿಂತಿದ್ದ ಮರದ ರೆಂಬೆಯೊಂದದ್ದಿವರ ಮೇಲೆ ಬಿದ್ದಿದೆ.ಗುಂಡಪ್ಪ ಅವರ ತಲೆ, ಕೈ ಹಾಗೂ ಇನ್ನಿತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಹಿಂಬದಿ ಸವಾರ ಬಾಲು ಅವರೂ ಗಾಯಗೊಂಡಿದ್ದಾರೆ.