Advertisement

Madikeri; ಮಹಿಳೆಯ ಬಂಧನ : 2.26 ಕೆಜಿ ಗಾಂಜಾ ವಶ

08:55 PM Sep 16, 2023 | Team Udayavani |

ಮಡಿಕೇರಿ: ನಾಪೋಕ್ಲು ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಅಸ್ಸಾಂ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ನಾಪೋಕ್ಲುವಿನಲ್ಲಿ ವಾಸವಿರುವ ಅಸ್ಸಾಂ ಮೂಲದ ದಿಲ್ಷಾನ್‌ ಬೇಗಂ (44) ಬಂಧಿತ ಆರೋಪಿ. ಆಕೆಯ ಬಳಿಯಿದ್ದ 2.26 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು.

ಸೋಮವಾರಪೇಟೆ ಡಿವೈಎಸ್‌ಪಿ ಆರ್‌.ವಿ.ಗಂಗಾಧರಪ್ಪ ಮಾರ್ಗದರ್ಶನದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್‌ ಮಾದಪ್ಪ, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್‌ ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next