ಮಡಿಕೇರಿ: ಕೊರೋನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ವ್ಯಾಪ್ತಿಯ ತಲಕಾಯಲಬೆಟ್ಟ ಹಳ್ಳಿಯಲ್ಲಿ ಝೀಕಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಕೆ.ಎಂ. ಸತೀಶ್ ಕುಮಾರ್ ಸಲಹೆ ನೀಡಿದ್ದಾರೆ.
ಜ್ವರ, ಕೆಂಪಾದ ಕಣ್ಣು, ಮೈ-ಕೈ ನೋವು, ಕೀಲುಗಳಲ್ಲಿ ನೋವು, ದೇಹದ ಮೇಲೆ ಕೆಂಪುರಕ್ತ ಮಿಶ್ರಿತ ಗುಳ್ಳೆಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣವಾಗಿದೆ. ಹೀಗಾಗಿ ಯಾವುದೇ ಜ್ವರವಿರಲಿ ತತ್‌ಕ್ಷಣವೇ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ಮನೆ ಪರಿಸರ, ಅಂಗಡಿ ಸಹಿತ ಎಲ್ಲಿಯೂ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು. ಆರೋಗ್ಯ ಸಿಬಂದಿ/ಆಶಾ ಕಾರ್ಯಕರ್ತೆಯರು ನೀಡುವ ಸಲಹೆ-ಸೂಚನೆಗಳನ್ನು ಪಾಲಿಸಬೇಕು
ಎಂದವರು ವಿವರಿಸಿದರು.