Advertisement

ಮಡಿವಾಳ ಮಾಚಿದೇವ ಜಯಂತಿ ಆಚರಣೆ

03:14 PM Feb 02, 2021 | Team Udayavani |

ಬಾಗಲಕೋಟೆ: 12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ ಎಂದು ನಿವೃತ್ತ ಪ್ರಾಚಾರ್ಯ ಪ್ರೊ| ಜಿ.ಬಿ.ಶೀಲವಂತ ಹೇಳಿದರು.

Advertisement

ಜಿಪಂ ಸಭಾ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತುಸಂಸ್ಕೃತಿ ಇಲಾಖೆ ಸಹಯೋಗದಲ್ಲಿ  ಹಮ್ಮಿಕೊಂಡ ಮಡಿವಾಳ ಮಾಚಿದೇವರಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, 12ನೇ ಶತಮಾನದ ಕಾಲದಲ್ಲಿ. ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ. ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ. ಮಾಚಿದೇವರು 354 ವಚನಗಳನ್ನು ಬರೆದಿದ್ದಾರೆ.

ಇದನ್ನೂ ಓದಿ:ಕೇಂದ್ರ ಸರ್ಕಾರದ್ದು ದಿವಾಳಿ ಬಜೆಟ್‌: ಲತಾ

Advertisement

ಮಡಿವಾಳ ತನ್ನ ಕಾಯಕದಲ್ಲಿ ಬಟ್ಟೆ ತೊಳೆಯುವುದರ ಜೊತೆಗೆ ಕೈ ಮತ್ತು ಕಲ್ಲನ್ನು ಸ್ವತ್ಛಗೊಳಿಸುವ ಕಾರ್ಯ ಮಾಡಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ. ರಾಜೇಂದ್ರ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತ ಮುಖ್ಯಲೆಕ್ಕಾಧಿಕಾರಿ ಉಕ್ಕಲಿ, ನಗರಸಭೆ ಸಭಾಪತಿ ರವಿ ದಾಮಜಿ, ಸಮುದಾಯದ ಮುಖಂಡರಾದ ಕೃಷ್ಣಪ್ಪ ವೀರಘಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಎನ್‌. ಹೇಮಾವತಿ, ರಕ್ಷಿತಾ ಗಂಗಾಧರ, ಲಕ್ಷ್ಮಿ ಗೌಡರ ಮುಂತಾದವರು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next