Advertisement

ತಮಿಳುನಾಡಿನ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ: ಮದ್ರಾಸ್ ಹೈಕೋರ್ಟ್

11:57 AM Dec 03, 2022 | Team Udayavani |

ಚೆನ್ನೈ:ತಮಿಳುನಾಡಿನಾದ್ಯಂತ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. ಪೂಜಾ ಸ್ಥಳಗಳಲ್ಲಿನ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ದೇವಾಲಯಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿರುವುದಾಗಿ ಕೋರ್ಟ್ ತಿಳಿಸಿದೆ.

Advertisement

ಇದನ್ನೂ ಓದಿ:ನಟ ಶಿವಣ್ಣ, ನಿರ್ದೇಶಕ ಹರ್ಷ ದಂಪತಿ ಸಮೇತ ರಾಯರ ಮಠಕ್ಕೆ ಭೇಟಿ

ಭಕ್ತರಿಗೆ ತೊಂದರೆಯಾಗದ ರೀತಿಯಲ್ಲಿ ದೇವಾಲಯಗಳಲ್ಲಿ ಮೊಬೈಲ್ ಫೋನ್ ಇಡಲು ಲಾಕರ್ ಗಳನ್ನು ನಿರ್ಮಾಣ ಮಾಡಬೇಕೆಂದು ಕೋರ್ಟ್ ಸೂಚನೆ ನೀಡಿರುವುದಾಗಿ ವರದಿ ಹೇಳಿದೆ.

ದೇವಾಲಯಗಳಲ್ಲಿ ಈ ಆದೇಶಗಳನ್ನು ಪಾಲಿಸುವ ನಿಟ್ಟಿನಲ್ಲಿ ಭದ್ರತಾ ಸಿಬಂದಿಯನ್ನು ನೇಮಕ ಮಾಡಲಾಗುವುದು ಎಂದು ಕೋರ್ಟ್ ತಿಳಿಸಿದೆ. ತಮಿಳುನಾಡಿನ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದೊಳಗೆ ಮೊಬೈಲ್ ಫೋನ್ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ಆದೇಶವನ್ನು ಹೊರಡಿಸಿದೆ.

ಮೊಬೈಲ್ ಫೋನ್ ಗಳಿಂದಾಗಿ ದೇವಾಲಯದೊಳಗೆ ಭಕ್ತರ ಗಮನ ಬೇರೆಡೆ ಸೆಳೆಯುತ್ತದೆ. ಅಲ್ಲದೇ ದೇವರ ಫೋಟೋ ಕ್ಲಿಕ್ಕಿಸುವುದು ಆಗಮ ಶಾಸ್ತ್ರ ನಿಯಮದ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದರು. ಛಾಯಾಗ್ರಹಣ ದೇವಾಲಯಗಳ ಭದ್ರತೆಗೂ ಅಪಾಯವನ್ನುಂಟು ಮಾಡುತ್ತದೆ ಎಂದು ದೂರಿರುವ ಅರ್ಜಿದಾರರು, ಮಹಿಳಾ ಭಕ್ತರ ಅನುಮತಿ ಇಲ್ಲದೇ ಫೋಟೋ ತೆಗೆಯುವುದು ನಿಯಮಗಳ ಉಲ್ಲಂಘನೆಯಾಗಲಿದೆ ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next