ಚೆನ್ನೈ: ಡಿಎಂಕೆ ನಾಯಕ ಸೆಂಥಿಲ್ ಬಾಲಾಜಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ಭಿನ್ನ ತೀರ್ಪು ನೀಡಿದೆ. ಸಚಿವರ ಪತ್ನಿ ಮೇಗಲಾ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಈಗ ವಿಸ್ತೃತ ಪೀಠಕ್ಕೆ ಉಲ್ಲೇಖಿಸಲಾಗಿದೆ.
ಜಾರಿ ನಿರ್ದೇಶನಾಲಯದಿಂದ ಸಚಿವರನ್ನು ಬಂಧಿಸಿರುವುದು ಕಾನೂನುಬಾಹಿರ ಎಂದು ಸಚಿವರ ಪತ್ನಿ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:ಚಿಕ್ಕಮಗಳೂರು: ಭಾರಿ ಮಳೆಗೆ ಧರೆಗುರುಳಿದ ಮರ… 2 ಗಂಟೆಗಳ ಕಾಲ ರಸ್ತೆ ಸಂಚಾರ ಬಂದ್
ನ್ಯಾಯಮೂರ್ತಿ ಜೆ.ನಿಶಾ ಬಾನು ಅವರು ಸಚಿವರ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಿ ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದರೆ, ನ್ಯಾಯಮೂರ್ತಿ ಡಿ. ಭರತ ಚಕ್ರವರ್ತಿ ಅವರು ವಿಭಾಗೀಯ ಪೀಠದಲ್ಲಿ ಹಿರಿಯ ನ್ಯಾಯಾಧೀಶರು ತೆಗೆದುಕೊಂಡ ಅಭಿಪ್ರಾಯಕ್ಕೆ ಭಿನ್ನರಾದರು. ಆದ್ದರಿಂದ ಇದೀಗ ಮೂರನೇ ನ್ಯಾಯಾಧೀಶ ಮುಖ್ಯ ನ್ಯಾಯಮೂರ್ತಿ ಎಸ್.ವಿ. ಗಂಗಾಪುರವಾಲಾ ಅವರು ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.
ಹೇಬಿಯಸ್ ಕಾರ್ಪಸ್ ಅರ್ಜಿಯಲ್ಲಿ ಸಚಿವರ ಪತ್ನಿಯು, ಬಂಧನವನ್ನು ಪ್ರಶ್ನಿಸಿದ್ದಾರೆ, ಬಂಧನದ ಸಮಯದಲ್ಲಿ ಇಡಿ ಕಾರ್ಯವಿಧಾನಗಳನ್ನು ಅನುಸರಿಸಲು ವಿಫಲವಾಗಿದೆ. ಆದ್ದರಿಂದ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಮತ್ತು ಅವರ ಪತಿಗೆ ಸ್ವಾತಂತ್ರ್ಯ ನೀಡಬೇಕು ಎಂದು ವಾದಿಸಿದರು.